ಕಾಡಿನ ಮಧ್ಯೆ ಮರಕ್ಕೆ ನೇಣು ಬಿಗದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ, ಪಕ್ಕದಲ್ಲಿ ಸಿಕ್ತು ಬೈಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 31 MARCH 2023

SAGARA : ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ (Youth) ಮೃತದೇಹ ಪತ್ತೆಯಾಗಿದೆ. ಪಕ್ಕದಲ್ಲಿಯೇ ಆತನ ಬೈಕ್ ಕೂಡ ಸಿಕ್ಕಿದೆ.

Youth-Found-hanging-in-Forest-in-Sagra-Ulluru.

ಸಾಗರ ತಾಲೂಕು ಉಳ್ಳೂರಿನ ಜೋಗಿನಗದ್ದೆ ಬಳಿ ಕಾಡಿನಲ್ಲಿ ಯುವಕನೊಬ್ಬನ (Youth) ಮೃತದೇಹ ಪತ್ತೆಯಾಗಿದೆ. ಗುರುವಾರ ಕಾಡಿನಲ್ಲಿ ಬೈಕ್ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಸಾಗರ ಗ್ರಾಮಾಂತರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದಾಗ ಪಕ್ಕದ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ.

ಇದನ್ನೂ ಓದಿ – ವಿವಿಧ ಚೆಕ್ ಪೊಸ್ಟ್ ಗಳಿಗೆ ರಾತ್ರಿ ಶಿವಮೊಗ್ಗ ಜಿಲ್ಲಾಧಿಕಾರಿ ದಿಢೀರ್ ಭೇಟಿ

ಮೃತನನ್ನು ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದ ಅಕ್ಷಯ್ ಎಂದು ಗುರುತಿಸಲಾಗಿದೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಇದನ್ನೂ ಓದಿ – ಬೆಳಗಿನ ಜಾವ ಎದುರು ಮನೆಯವರು ಕರೆ ಮಾಡಿದಾಗ ಮನೆ ಮಾಲೀಕನಿಗೆ ಶಾಕ್

Nammur-News-Whatsapp

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment