GOOD NEWS | ಬಸ್ ನಿಲ್ದಾಣದಲ್ಲಿ ಮಾನಸಿಕ ಅಸ್ವಸ್ಥೆ ಪ್ರತ್ಯಕ್ಷ, ಯುವಕರು, ಅಧಿಕಾರಿಗಳಿಂದ ಬದಲಾಯ್ತು ಆಕೆಯ ಬದುಕು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SAGARA NEWS | 03 JANUARY 2021

ಮಾನಸಿಕ ಅಸ್ವಸ್ಥೆಯೊಬ್ಬಳಿಗೆ ಊಟ, ಬಟ್ಟೆ, ಚಿಕಿತ್ಸೆ ಕೊಡಿಸಿ, ಆಕೆಯನ್ನು ಅನಾಥಶ್ರಮಕ್ಕೆ ಸೇರಿಸಿ ಸಾಗರದ ಯುವಕರ ತಂಡ ಮಾನವೀಯತೆ ಮೆರೆದಿದೆ. ಪೊಲೀಸರು, ಸಾಗರ ನಗರಸಭೆ ಅಧಿಕಾರಿಗಳು ಈ ಕಾರ್ಯದಲ್ಲಿ ಜೊತೆಯಾಗಿದ್ದರು.

ಎಲ್ಲಿ ಇದು? ಯಾರಿದು ಮಹಿಳೆ?

ಸಾಗರದ ಕೆಳದಿ ರಸ್ತೆಯ ರಾಣಿ ಚೆನ್ನಮ್ಮ ಸರ್ಕಲ್‍ನ ಬಸ್‍ ನಿಲ್ದಾಣದ ಬಳಿ ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರು ಪತ್ತೆಯಾಗಿದ್ದಾರೆ. ಅವರ ಹೆಸರು, ಊರು ಗೊತ್ತಾಗಿಲ್ಲ. ತೀವ್ರ ಚಳಿ ಮತ್ತು ರಾತ್ರಿ ವೇಳೆ ಮಹಿಳೆಯೊಬ್ಬಳು ಏಕಾಂಗಿಯಾಗಿ ಹೀಗೆ ಪಟ್ಟಣದಲ್ಲಿ ಇರುವುದು ಸುರಕ್ಷಿತವಲ್ಲ ಎಂದು ಮನಗಂಡ ಯುವಕರ ತಂಡ, ಆಕೆಯ ರಕ್ಷಣೆ ಮಾಡಿ, ಪೊಲೀಸರ ನೆರವಿನೊಂದಿಗೆ ಅನಾಥಾಶ್ರಮಕ್ಕೆ ಸೇರಿಸಿದ್ದಾರೆ.

ನೆರವಾದ ಸೋಷಿಯಲ್ ಟೀಂ

ದಲಿತ ಸಂಘರ್ಷ ಸಮಿತಿಯ ನಾಗರಾಜ್ ಅವರು ಮಹಿಳೆಯನ್ನು ಗಮನಿಸಿ, ಊಟ, ಬಟ್ಟೆ ವ್ಯವಸ್ಥೆ ಮಾಡಿದರು. ಸೋಷಿಯಲ್ ಟೀಂನ ಪತ್ರಕರ್ತ ಇಮ್ರಾನ್ ಸಾಗರ್ ಅವರಿಗೆ ಮಾಹಿತಿ ನೀಡಿದ್ದಾರೆ. ಮಹಿಳೆಯ ಸ್ಥಿತಿ ಕಂಡು ಕೂಡಲೆ ಕಾರ್ಯಪ್ರವೃತ್ತರಾದ ಇಮ್ರಾನ್ ಸಾಗರ್, ಪೊಲೀಸರು ಮತ್ತು ಸಾಗರ ನಗರಸಭೆಗೆ ಮಾಹಿತಿ ನೀಡಿದ್ದಾರೆ. ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಅಲ್ಲದೆ ತಮ್ಮ ಪರಿಚಿತ ಸಿದ್ದಾಪುರದ ಪ್ರಚಲಿತ ಆಶ್ರಯಧಾಮ ಅನಾಥಾಶ್ರಮದ ಮುಖ್ಯಸ್ಥ ನಾಗರಾಜ್ ನಾಯ್ಕ್ ಅವರನ್ನು ಸಂಪರ್ಕಿಸಿ, ಮಹಿಳೆಯನ್ನು ಅಲ್ಲಿಗೆ ಸೇರಿಸಿದ್ದಾರೆ.

ಇನ್ಸ್‍ಪೆಕ್ಟರ್ ಅಶೋಕ್ ಕುಮಾರ್, ನಗರಸಭೆ ಆಯುಕ್ತ ನಾಗಪ್ಪ, ಪೋಲೀಸ್ ಸಿಬ್ಬಂದಿಗಳಾದ ಪ್ರತಿಭಾ, ಮಲ್ಲೇಶ್, ಸಂತೋಷ್ ಹಾಗೂ ಸೋಶಿಯಲ್ ಟೀಂನ ಅಣಲೇಕೊಪ್ಪದ ಅಬ್ಬಾಸ್, ಆಂಬುಲೆನ್ಸ್ ಫಯಾಜ್, ಬೆಂಗಳೂರಿನ ಜಾಕಿರ್ ಈ ಕಾರ್ಯದಲ್ಲಿ ಜೊತೆಯಾಗಿದ್ದರು.

134664933 1301547873539963 1469359939030016371 o.jpg? nc cat=102&ccb=2& nc sid=730e14& nc ohc=VG7wagdVjHEAX85Yq7E& nc ht=scontent.fblr1 6

133828882 1301547853539965 4419639196107870744 o.jpg? nc cat=103&ccb=2& nc sid=730e14& nc ohc=7qpMcpgvVy0AX87TS17& nc ht=scontent.fblr1 5

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 3, 2021

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

Leave a Comment