ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 12 FEBRUARY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SAGARA : ಜಗಳದ ವೇಳೆ ಆಟಿಕೆ ಪಿಸ್ತೂಲು ಪ್ರದರ್ಶಿಸಿ ಸಾರ್ವಜನಿಕರಲ್ಲಿ ಆಂತಕ ಮೂಡಿಸಿದ್ದ ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ವಿಚಾರಣೆ ನಡೆಸಿದರು. ಸಾಗರದ ಜೆ.ಪಿ.ನಗರದಲ್ಲಿ ಕಳೆದ ರಾತ್ರಿ ಗಲಾಟೆ ವೇಳೆ ಪಿಸ್ತೂಲು ಪ್ರದರ್ಶಿಸಲಾಗಿತ್ತು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಆಯನೂರಿನ ದರ್ಶನ್ (19) ಮತ್ತು ಸಾಗರದ ನವೀನ್ (25) ಎಂಬಾತನ ವಿಚಾರಣೆ ನಡೆಸಲಾಯಿತು ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಫೆ.11ರ ರಾತ್ರಿ ಯುವಕರ ಮಧ್ಯೆ ಗಲಾಟೆಯಾಗಿತ್ತು. ಈ ವೇಳೆ ದರ್ಶನ್, ಪಿಸ್ತೂಲು ತೋರಿಸಿದ್ದ. ಇದರಿಂದ ಸ್ಥಳೀಯರು ಆತಂಕಕ್ಕೀಡಾಗಿದ್ದರು. ಕೆಲವರು ಗಲಾಟೆಯ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದರು.
ಈ ವಿಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಸಾಗರ ಠಾಣೆ ಇನ್ಸ್‌ಪೆಕ್ಟರ್ ಸೀತಾರಾಂ, ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಈ ವೇಳೆ ಆಟಿಕೆ ಪಿಸ್ತೂಲು ಪ್ರದರ್ಶಿಸಿರುವುದಾಗಿ ಯುವಕರು ಹೇಳಿದ್ದಾರೆ. ಘಟನೆ ಕುರಿತು ಸಾಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಅಜ್ಜಿಯ ಅಂತ್ಯ ಸಂಸ್ಕಾರ ಮುಗಿಸಿ ಮರಳಿದಾಗ ಮನೆ ಬಾಗಿಲು ತೆಗೆದಿತ್ತು, ಕೊಠಡಿಯಲ್ಲಿ ಲೈಟ್ ಉರಿಯುತ್ತಿತ್ತು, ಕೇಸ್ ದಾಖಲು