ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 30 ಡಿಸೆಂಬರ್ 2019
ಪೌಷ್ಠಿಕ ಆಹಾರ ಘಟಕ ಸ್ಥಳಾಂತರ ವಿರೋಧಿಸಿ ಪ್ರತಿಭಟನೆ ನಡೆಸಿದ ಜಿಲ್ಲಾ ಪಂಚಾಯಿತಿ ಸದಸ್ಯೆಯೊಬ್ಬರನ್ನು, ಪೊಲೀಸರು ಬಂಧಿಸಿದ್ದಾರೆ. ಇದರಿಂದಾಗಿ ಕೆಲಕಾಲ ಆನಂದಪುರದ ಆಹಾರ ಘಟಕದ ಮುಂದೆ ಹೈಡ್ರಾಮಾ ನಡೆಯಿತು. ಈ ವೇಳೆ, ತಮ್ಮ ಬಂಧನ ಕ್ರಮವೇ ತಪ್ಪು ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಆರೋಪ ಮಾಡಿದ್ದಾರೆ.
ಜಿಲ್ಲಾ ಪಂಚಾಯಿತಿ ಸದಸ್ಯೆ ಪ್ರತಿಭಟಿಸಿದ್ದೇಕೆ?
ಆನಂದಪುರದಲ್ಲಿ ಸಾಗರ ಮತ್ತು ಸೊರಬ ತಾಲೂಕು ಮಹಿಳಾ ಪೂರಕ ಪೌಷ್ಠಿಕ ಆಹಾರ ಉತ್ಪಾದನಾ ಘಟಕವಿದೆ. ಇದನ್ನು ಸಾಗರಕ್ಕೆ ಸ್ಥಳಾಂತರಿಸಲು ಸರ್ಕಾರ ನಿರ್ಧರಿಸಿದೆ. ಇದನ್ನು ವಿರೋಧಿಸಿ ಜಿಲ್ಲಾ ಪಂಚಾಯಿತಿ ಸದಸ್ಯೆ ಅನಿತಾ ಕುಮಾರಿ ಅವರು ಘಟಕದ ಮುಂದೆ ಪ್ರತಿಭಟನೆ ನಡೆಸಿದರು. ಈ ವೇಳೆ ‘ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ’ ಎಂದು ಆರೋಪಿಸಿ ಪೊಲೀಸರು ಅನಿತಾ ಕುಮಾರಿ ಮತ್ತು ಆನಂದಪುರ ಗ್ರಾಮ ಪಂಚಾಯಿತಿ ಸದಸ್ಯರಾದ ಸಿರಿಜಾನ್ ಅವರನ್ನು ವಶಕ್ಕೆ ಪಡೆದರು.
ಸ್ಥಳಾಂತರಕ್ಕೆ ಏಕೆ ವಿರೋಧ?
ಪ್ರತಿಭಟನೆ ಕುರಿತು ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ಜಿಲ್ಲಾ ಪಂಚಾಯಿತಿ ಸದಸ್ಯೆ ಅನಿತಾ ಕುಮಾರಿ, ಘಟಕ ಸ್ಥಳಾಂತರ ಕುರಿತು ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿಯಲ್ಲಿ ನಿರ್ಣಯವಾಗಬೇಕು. ಆದರೆ ಸರ್ಕಾರದ ಮಟ್ಟದಲ್ಲಿ ಆದೇಶ ಮಾಡಿಸುವುದು ಸರಿಯಲ್ಲ. ಈ ಘಟಕದಲ್ಲಿ ಸುತ್ತಮುತ್ತಲ ಪ್ರದೇಶದ ಮಹಿಳೆಯರು ಕೆಲಸ ಮಾಡುತ್ತಿದ್ದಾರೆ. ಸಾಗರಕ್ಕೆ ಸ್ಥಳಾಂತರವಾದರೆ ಈ ಮಹಿಳೆಯರಿಗೆ ಅನ್ಯಾಯವಾಗಲಿದೆ ಎಂದರು.
ಅವ್ಯವಹಾರದ ತನಿಖೆಯಾಗಲಿ..
ಮಹಿಳಾ ಪೂರಕ ಪೌಷ್ಠಿಕ ಆಹಾರ ಉತ್ಪಾದನಾ ಘಟಕದ ಏಕಾಏಕಿ ಸ್ಥಳಾಂತರ ಕುರಿತು ಜಿಲ್ಲಾ ಪಂಚಾಯಿತಿ ಸಭೆಯಲ್ಲೂ ಚರ್ಚೆಯಾಗಿತ್ತು. ‘ಪೊಲೀಸ್ ರಕ್ಷಣೆಯಲ್ಲಿ ದಿಢೀರ್ ಸ್ಥಳಾಂತರ ಕಾರ್ಯ ಆರಂಭಿಸಿದ್ದರು. ಆದರೆ ರಕ್ಷಣೆ ಕೋರಿದ್ದ ಅಧಿಕಾರಿಯೇ ಸ್ಥಳದಲ್ಲಿ ಇರಲಿಲ್ಲ. ಈ ಘಟಕದಲ್ಲಿ ಭಾರೀ ಅವ್ಯವಹಾರ ನಡೆದಿದೆ. 400 ಟನ್ ಅಕ್ಕಿ, ಗೋಧಿ ಲೆಕ್ಕವೇ ಇಲ್ಲ. ಇದರ ತನಿಖೆ ನಡೆಸಬೇಕು. ಆದರೆ ಯಾವುದೇ ಕಾರಣಕ್ಕೂ ಘಟಕ ಸ್ಥಳಾಂತರ ಮಾಡುವಂತಿಲ್ಲ’ ಎಂದು ಅನಿತಾ ಕುಮಾರಿ ಒತ್ತಾಯಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422