ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS
SHIKARIPURA | ಸಂಸದ ಬಿ.ವೈ.ರಾಘವೇಂದ್ರ ಅವರ ಬ್ಯಾಂಕ್ ಖಾತೆಗೆ ಕನ್ನ ಹಾಕಿ ಹ್ಯಾಕರ್ (ACCOUNT HACKER) ಒಬ್ಬ 16 ಲಕ್ಷ ರೂ. ಹಣ ಲಪಟಾಯಿಸಿದ್ದ. ಈ ಪ್ರಕರಣವನ್ನು ಶಿವಮೊಗ್ಗ ಪೊಲೀಸರು ಭೇದಿಸಿದ್ದರು ಎಂದು ರಾಘವೇಂದ್ರ ಅವರು ಹೇಳಿಕೊಂಡಿದ್ದಾರೆ.
ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್, ಕೆನರಾ ಬ್ಯಾಂಕ್ ಸಂಯುಕ್ತ ಆಶ್ರಯದಲ್ಲಿ ಬ್ಯಾಂಕ್ ಡಿಜಟಲ್ ಪಾವತಿ ಮಾಹಿತಿ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ತಮ್ಮ ಬ್ಯಾಂಕ್ ಖಾತೆಯಿಂದ ಸೈಬರ್ ಖದೀಮರು (ACCOUNT HACKER) ಹಣ ಲಪಟಾಯಿಸಿದ ಘಟನೆಯನ್ನು ವಿವರಿಸಿದರು.
(ACCOUNT HACKER)
ಸಂಸದ ರಾಘವೇಂದ್ರ ಹೇಳಿದ್ದೇನು?
ಬ್ಯಾಂಕಿಂಗ್ ವ್ಯವಸ್ಥೆ ಡಿಜಿಟಲಿಕರಣಗೊಂಡಿದೆ. ಈ ವೇಳೆ ಗ್ರಾಹಕರು ಅತ್ಯಂತ ಎಚ್ಚರಿಕೆ ವಹಿಸಬೇಕಿದೆ. ಒಟಿಪಿ ನಂಬರ್ ಕುರಿತು ಮುತುವರ್ಜಿಯಿಂದ ಇರಬೇಕು. ವಾಟ್ಸಪ್ ಮೂಲಕ ಅಥವಾ ಮೆಸೇಜ್ ಮೂಲಕ ಒಟಿಪಿ ಕೇಳುತ್ತಾರೆ. ಬ್ಯಾಂಕುಗಳು ಹಾಗೆ ಒಟಿಪಿ ನಂಬರ್ ಕೇಳುವುದಿಲ್ಲ. ಅನುಮಾನ ಬಂದರೆ ನೇರವಾಗಿ ಬ್ಯಾಂಕನ್ನು ಸಂಪರ್ಕಿಸಬೇಕು ಎಂದು ಬಿ.ವೈ.ರಾಘವೇಂದ್ರ ಸಲಹೆ ನೀಡಿದರು.
ಕ್ಲಿಕ್ ಮಾಡಿ ಇದನ್ನೂ ಓದಿ | ‘ಕಸ್ಟಮರ್ ಕೇರ್’ಗೆ ಕರೆ ಮಾಡಿದ್ಮೇಲೆ ಶಿವಮೊಗ್ಗದ ವ್ಯಕ್ತಿಯ ಬ್ಯಾಂಕ್ ಖಾತೆಯಲ್ಲಿ ಉಳಿದದ್ದು ಬರೀ 2 ರೂ..!
ಶಿವಮೊಗ್ಗದ ಇಂಜಿನಿಯರಿಂಗ್ ಕಾಲೇಜಿಗೆ ಸಂಬಂಧಿಸಿದ ನನ್ನ ಬ್ಯಾಂಕ್ ಖಾತೆಯಿಂದ 16 ಲಕ್ಷ ರೂ. ಹಣ ದಿಢೀರ್ ವರ್ಗಾವಣೆಯಾಗಿತ್ತು. ಆದರೆ ಆ ಖಾತೆಯಿಂದ ನಾನು ಯಾವುದೆ ಹಣ ವರ್ಗಾವಣೆ ಮಾಡಿರಲಿಲ್ಲ. ಹಾಗಾಗಿ ಶಿವಮೊಗ್ಗ ಪೊಲೀಸರಿಗೆ ದೂರು ನೀಡಿದ್ದೆ. ತನಿಖೆ ನಡೆಸಿದ ಪೊಲೀಸರು ಮುಂಬೈನಲ್ಲಿ ಹ್ಯಾಕರ್ (ACCOUNT HACKER) ಒಬ್ಬನನ್ನು ಪತ್ತೆ ಹಚ್ಚಿ ಬಂಧಿಸಿದರು. ನನ್ನ ಹಾಗೆ ಹಲವರಿಗೆ ಆ ಹ್ಯಾಕರ್ ವಂಚಿಸಿದ್ದ. ಕೊನೆಗೆ ನನ್ನ ಖಾತೆಗೆ ಹಣ ವಾಪಸ್ ಬಂತು ಎಂದು ತಿಳಿಸಿದರು.
ಕ್ಲಿಕ್ ಮಾಡಿ ಇದನ್ನೂ ಓದಿ | ಸಣ್ಣ ಎಡವಟ್ಟು, ಒಂದೇ ಗಂಟೆಯಲ್ಲಿ ಬ್ಯಾಂಕ್ ಖಾತೆಯಿಂದ 10 ಭಾರಿ ಹಣ ಕದ್ದ ಕಳ್ಳರು
ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿದೆ. ಅದರ ಜೊತೆಗೆ ಎಚ್ಚರಿಕೆ ಕೂಡ ಅನಿವಾರ್ಯ. ಡಿಜಿಟಲ್ ವ್ಯವಸ್ಥೆ ಕುರಿತು ಯಾರೂ ಆತಂಕ ಪಡುವ ಅಗತ್ಯವಿಲ್ಲ. ಆರ್.ಬಿ.ಐ ಮತ್ತು ರಾಷ್ಟ್ರೀಕೃತ ಬ್ಯಾಂಕುಗಳು ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆಯನ್ನು ಅತ್ಯಂತ ಸುರಕ್ಷಿತವಾಗಿ ರೂಪಿಸಿದೆ ಎಂದು ತಿಳಿಸಿದರು.
ಕೆನರಾ ಬ್ಯಾಂಕ್ ಎಜಿಎಂ ಪ್ರದೀಪ್ ಕುಮಾರ್ ,ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಉಪ ಮಹಾ ಪ್ರಬಂಧಕ ಎ.ರಾಜಮಣಿ, ಲೀಡ್ ಬ್ಯಾಂಕ್ ಮ್ಯಾನೇಜರ್ ಯತೀಶ್, ನಬಾರ್ಡ್ ಅಧಿಕಾರಿ ರವಿ, ಹಯವಧನ ಉಪಾಧ್ಯಯ, ಗಣೇಶ್, ಶಿಕಾರಿಪುರ ಪುರಸಭೆ ಅಧ್ಯಕ್ಷೆ ರೇಖಾ ಭಾಯಿ, ಮುಖ್ಯಧಿಕಾರಿ ಭರತ್, APMC ನಿರ್ದೇಶಕರಾದ ಸುಧೀರ್, ರಾಘವೇಂದ್ರ ಮತ್ತಿತರರು ಉಪಸ್ಥಿತರಿದ್ದರು.
ಕ್ಲಿಕ್ ಮಾಡಿ ಇದನ್ನೂ ಓದಿ | 20 ವರ್ಷದಿಂದ ಖಾಲಿ ಬಿಟ್ಟ ಸೈಟಲ್ಲಿ ಮನೆ ಕಟ್ಟಲು 3 ತಿಂಗಳು ಗಡುವು, ತಪ್ಪಿದರೆ ಏನಾಗುತ್ತೆ?
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422