ಅಂಜನಾಪುರ ಜಲಾಶಯ ಭರ್ತಿ, ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIKARIPURA | 7 ಜುಲೈ 2022

ನಿರಂತರ ಮಳೆ ಹಿನ್ನೆಲೆ ಶಿಕಾರಿಪುರ ತಾಲೂಕಿನ ಅಂಜನಾಪುರ ಜಲಾಶಯ (DAM) ಕೋಡಿ ಬಿದ್ದಿದೆ. ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಕೋಡಿ ಬಿದ್ದಿದೆ.

Shimoga Nanjappa Hospital

ಹಿನ್ನೀರು ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಆದ್ದರಿಂದ ಅಂಜನಾಪುರ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದೆ. ಹಾಗಾಗಿ ಅಂಜನಾಪುರ ಜಲಾಶಯ ಕೋಡಿ ಬಿದ್ದಿದೆ. 23 ಅಡಿ ನೀರು ಭರ್ತಿಯಾದರೆ ಜಲಾಶಯ ಕೋಡಿ ಬೀಳುತ್ತದೆ.

ವಾಡಿಕೆಗಿಂತಲೂ ಮೊದಲೆ ಭರ್ತಿ

ಅಂಜನಾಪುರ ಜಲಾಶಯ ಈ ಬಾರಿ ವಾಡಿಕೆಗಿಂತಲೂ ಮೊದಲೆ ಭರ್ತಿಯಾಗಿದೆ. ಸಾಮಾನ್ಯವಾಗಿ ಜುಲೈ ಕೊನೆ ವಾರ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಅಂಜನಾಪುರ ಜಲಾಶಯ ಭರ್ತಿಯಾಗುತ್ತಿತ್ತು. ಕಳೆದ ವರ್ಷವು ಜುಲೈ ಮೊದಲ ವಾರದಲ್ಲೆ ತುಂಬಿತ್ತು. ಇದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ಕೃಷಿ, ಕುಡಿಯುವ ನೀರಿನ ಮೂಲ

ಅಂಜನಾಪುರ ಜಲಾಶಯವು 1.82 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ಶಿಕಾರಿಪುರ ಮತ್ತು ಶಿರಾಳಕೊಪ್ಪ ಪಟ್ಟಣಕ್ಕೆ ಇಲ್ಲಿಂದಲೆ ಕುಡಿಯುವ ನೀರು ಪೂರೈಕೆಯಾಗುತ್ತದೆ. ಅಲ್ಲದೆ 6,732 ಹೆಕ್ಟೇರ್‍ ಪ್ರದೇಶಕ್ಕೆ ನೀರುಣಿಸುತ್ತಿದೆ. ಹಾಗಾಗಿ ಜಲಾಶಯ ಭರ್ತಿಯಾಗುತ್ತಿದ್ದಂತೆ ಶಿಕಾರಿಪುರ ಜನತೆ ಹರ್ಷ ವ್ಯಕ್ತಪಡಿಸುತ್ತಾರೆ.

ಪ್ರವಾಸಿಗರ ಸಂಖ್ಯೆ ಹೆಚ್ಚಳ

ಮೈಸೂರು ಮಹಾರಾಜರು 1936ರಲ್ಲಿ ಅಂಜನಾಪುರ ಜಲಾಶಯವನ್ನು (DAM) ನಿರ್ಮಿಸಿದರು. 1600 ಮೀಟರ್ ಮಣ್ಣಿನ ಏರಿ ಹೊಂದಿದ್ದು, 21 ಅಡಿ ಎತ್ತರವಿದೆ. ಇನ್ನು, ಅಂಜನಾಪುರ ಜಲಾಶಯದ ಒಳಹರಿವು ಹೆಚ್ಚಳವಾದ ಸುದ್ದಿ ತಿಳಿಯುತ್ತಿದ್ದಂತೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ಪಕ್ಕದಲ್ಲಿ ರಾಕ್ ಗಾರ್ಡನ್ ಇರುವುದರಿಂದ ಪ್ರವಾಸಿಗರು ಸಮಯ ಕಳೆಯಲು ಇಲ್ಲಿ ಅವಕಾಶವಾಗಲಿದೆ. ಜಲಾಶಯ ಭರ್ತಿಯಾದ ವಿಚಾರ ತಿಳಿಯುತ್ತಿದ್ದಂತೆ ಪ್ರವಾಸಿಗರು ಅಂಜನಾಪುರ ಜಲಾಶಯದ ಬಳಿಗೆ ಬಂದು ಕಣ್ತುಂಬಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ – ಭಾರಿ ಮಳೆ, ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment