SHIVAMOGGA LIVE NEWS | 16 JULY 2024
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
SHIKARIPURA : ನಿರಂತರ ಮಳೆಗೆ ಶಿಕಾರಿಪುರ ತಾಲೂಕಿನ ಅಂಜನಾಪುರ ಜಲಾಶಯ (DAM) ಕೋಡಿ ಬಿದ್ದಿದೆ. ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಇವತ್ತು ಮಧ್ಯಾಹ್ನ ಕೋಡಿ ಬಿದ್ದಿದೆ.
ಹಿನ್ನೀರು ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಆದ್ದರಿಂದ ಅಂಜನಾಪುರ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದೆ. ಹಾಗಾಗಿ ಅಂಜನಾಪುರ ಜಲಾಶಯ ಕೋಡಿ ಬಿದ್ದಿದೆ. 23 ಅಡಿ ನೀರು ಭರ್ತಿಯಾದರೆ ಜಲಾಶಯ ಕೋಡಿ ಬೀಳುತ್ತದೆ.
ವಾಡಿಕೆಗಿಂತಲು ಮೊದಲೆ ಭರ್ತಿ
ಅಂಜನಾಪುರ ಜಲಾಶಯ ಈ ಬಾರಿ ವಾಡಿಕೆಗಿಂತಲೂ ಮೊದಲೆ ಭರ್ತಿಯಾಗಿದೆ. ಸಾಮಾನ್ಯವಾಗಿ ಜುಲೈ ಕೊನೆ ವಾರ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಅಂಜನಾಪುರ ಜಲಾಶಯ ಭರ್ತಿಯಾಗುತ್ತಿತ್ತು. ಕಳೆದ ವರ್ಷವು ಜುಲೈ ಮೊದಲ ವಾರದಲ್ಲೆ ತುಂಬಿತ್ತು. ಇದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ಕೃಷಿ, ಕುಡಿಯುವ ನೀರಿನ ಮೂಲ
ಅಂಜನಾಪುರ ಜಲಾಶಯವು 1.82 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ಶಿಕಾರಿಪುರ ಮತ್ತು ಶಿರಾಳಕೊಪ್ಪ ಪಟ್ಟಣಕ್ಕೆ ಇಲ್ಲಿಂದಲೆ ಕುಡಿಯುವ ನೀರು ಪೂರೈಕೆಯಾಗುತ್ತದೆ. ಅಲ್ಲದೆ 6,732 ಹೆಕ್ಟೇರ್ ಪ್ರದೇಶಕ್ಕೆ ನೀರುಣಿಸುತ್ತಿದೆ. ಹಾಗಾಗಿ ಜಲಾಶಯ ಭರ್ತಿಯಾಗುತ್ತಿದ್ದಂತೆ ಶಿಕಾರಿಪುರ ಜನತೆ ಹರ್ಷ ವ್ಯಕ್ತಪಡಿಸುತ್ತಾರೆ.

ಮೈಸೂರು ಮಹಾರಾಜರು 1936ರಲ್ಲಿ ಅಂಜನಾಪುರ ಜಲಾಶಯವನ್ನು (DAM) ನಿರ್ಮಿಸಿದರು. 1600 ಮೀಟರ್ ಮಣ್ಣಿನ ಏರಿ ಹೊಂದಿದ್ದು, 21 ಅಡಿ ಎತ್ತರವಿದೆ. ಜಲಾಶಯ ಭರ್ತಿಯಾದ ವಿಚಾರ ತಿಳಿಯುತ್ತಿದ್ದಂತೆ ಸುತ್ತಮುತ್ತಲ ಗ್ರಾಮಸ್ಥರು ಅಂಜನಾಪುರ ಜಲಾಶಯಕ್ಕೆ ಬಂದು ಕಣ್ತುಂಬಿಕೊಳ್ಳುತ್ತಿದ್ದಾರೆ.
ಇದನ್ನೂ ಓದಿ ⇓
ಶಿವಮೊಗ್ಗದಲ್ಲಿ ದುಡ್ಡು ಕೊಟ್ಟರಷ್ಟೆ ಮಂಟಪ ಮುಳುಗಿರುವುದು ನೋಡಲು ಅವಕಾಶ
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





