ಅಂಜನಾಪುರ ಜಲಾಶಯ ಭರ್ತಿ, ಕೋಡಿ ಬಿದ್ದ ವಿಷಯ ತಿಳಿದು ರೈತರು ಹರ್ಷ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | 16 JULY 2024

SHIKARIPURA : ನಿರಂತರ ಮಳೆಗೆ ಶಿಕಾರಿಪುರ ತಾಲೂಕಿನ ಅಂಜನಾಪುರ ಜಲಾಶಯ (DAM) ಕೋಡಿ ಬಿದ್ದಿದೆ. ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಇವತ್ತು ಮಧ್ಯಾಹ್ನ ಕೋಡಿ ಬಿದ್ದಿದೆ. ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ಹಿನ್ನೀರು ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಆದ್ದರಿಂದ ಅಂಜನಾಪುರ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದೆ. ಹಾಗಾಗಿ ಅಂಜನಾಪುರ ಜಲಾಶಯ ಕೋಡಿ ಬಿದ್ದಿದೆ. 23 ಅಡಿ ನೀರು ಭರ್ತಿಯಾದರೆ ಜಲಾಶಯ ಕೋಡಿ ಬೀಳುತ್ತದೆ.

ವಾಡಿಕೆಗಿಂತಲು ಮೊದಲೆ ಭರ್ತಿ

ಅಂಜನಾಪುರ ಜಲಾಶಯ ಈ ಬಾರಿ ವಾಡಿಕೆಗಿಂತಲೂ ಮೊದಲೆ ಭರ್ತಿಯಾಗಿದೆ. ಸಾಮಾನ್ಯವಾಗಿ ಜುಲೈ ಕೊನೆ ವಾರ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಅಂಜನಾಪುರ ಜಲಾಶಯ ಭರ್ತಿಯಾಗುತ್ತಿತ್ತು. ಕಳೆದ ವರ್ಷವು ಜುಲೈ ಮೊದಲ ವಾರದಲ್ಲೆ ತುಂಬಿತ್ತು. ಇದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

anjanapura dam

ಕೃಷಿ, ಕುಡಿಯುವ ನೀರಿನ ಮೂಲ

ಅಂಜನಾಪುರ ಜಲಾಶಯವು 1.82 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ಶಿಕಾರಿಪುರ ಮತ್ತು ಶಿರಾಳಕೊಪ್ಪ ಪಟ್ಟಣಕ್ಕೆ ಇಲ್ಲಿಂದಲೆ ಕುಡಿಯುವ ನೀರು ಪೂರೈಕೆಯಾಗುತ್ತದೆ. ಅಲ್ಲದೆ 6,732 ಹೆಕ್ಟೇರ್‍ ಪ್ರದೇಶಕ್ಕೆ ನೀರುಣಿಸುತ್ತಿದೆ. ಹಾಗಾಗಿ ಜಲಾಶಯ ಭರ್ತಿಯಾಗುತ್ತಿದ್ದಂತೆ ಶಿಕಾರಿಪುರ ಜನತೆ ಹರ್ಷ ವ್ಯಕ್ತಪಡಿಸುತ್ತಾರೆ.

Anjanapura Dam

ಮೈಸೂರು ಮಹಾರಾಜರು 1936ರಲ್ಲಿ ಅಂಜನಾಪುರ ಜಲಾಶಯವನ್ನು (DAM) ನಿರ್ಮಿಸಿದರು. 1600 ಮೀಟರ್ ಮಣ್ಣಿನ ಏರಿ ಹೊಂದಿದ್ದು, 21 ಅಡಿ ಎತ್ತರವಿದೆ. ಜಲಾಶಯ ಭರ್ತಿಯಾದ ವಿಚಾರ ತಿಳಿಯುತ್ತಿದ್ದಂತೆ ಸುತ್ತಮುತ್ತಲ ಗ್ರಾಮಸ್ಥರು ಅಂಜನಾಪುರ ಜಲಾಶಯಕ್ಕೆ ಬಂದು ಕಣ್ತುಂಬಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ ⇓

ಶಿವಮೊಗ್ಗದಲ್ಲಿ ದುಡ್ಡು ಕೊಟ್ಟರಷ್ಟೆ ಮಂಟಪ ಮುಳುಗಿರುವುದು ನೋಡಲು ಅವಕಾಶ 

Leave a Comment