ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿಕಾರಿಪುರ : ನಿರಂತರ ಮಳೆಗೆ ಶಿಕಾರಿಪುರ ತಾಲೂಕಿನ ಅಂಜನಾಪುರ ಜಲಾಶಯ (DAM) ಭರ್ತಿಯಾಗಿ ಕೋಡಿ ಬಿದ್ದಿದೆ. ವಾಡಿಕೆಗು ಮೊದಲೇ ಜಲಾಶಯ ಭರ್ತಿಯಾಗಿದೆ.
ಹಿನ್ನೀರು ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಆದ್ದರಿಂದ ಅಂಜನಾಪುರ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದೆ. ಹಾಗಾಗಿ ಅಂಜನಾಪುರ ಜಲಾಶಯ ಭರ್ತಿಯಾಗಿದೆ. 23 ಅಡಿ ನೀರು ತುಂಬಿ ಜಲಾಶಯ ಕೋಡಿ ಬಿದ್ದಿದೆ.

ವಾಡಿಕೆಗು ಮೊದಲೆ ಭರ್ತಿ
ಅಂಜನಾಪುರ ಜಲಾಶಯ ಈ ಬಾರಿ ವಾಡಿಕೆಗಿಂತಲೂ ಮೊದಲೆ ಭರ್ತಿಯಾಗಿದೆ. ಸಾಮಾನ್ಯವಾಗಿ ಜುಲೈ ಕೊನೆ ವಾರ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಭರ್ತಿಯಾಗುತಿತ್ತು. ಕಳೆದ ವರ್ಷ ಜುಲೈ ಮಧ್ಯೆ ಭಾಗದಲ್ಲಿ ಕೋಡಿ ಬಿದ್ದಿತ್ತು. ಇದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ಕೃಷಿ, ಕುಡಿಯುವ ನೀರಿನ ಮೂಲ
ಅಂಜನಾಪುರ ಜಲಾಶಯವು 1.82 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ಶಿಕಾರಿಪುರ ಮತ್ತು ಶಿರಾಳಕೊಪ್ಪ ಪಟ್ಟಣಕ್ಕೆ ಇಲ್ಲಿಂದಲೆ ಕುಡಿಯುವ ನೀರು ಪೂರೈಕೆಯಾಗುತ್ತದೆ. ಅಲ್ಲದೆ 6,732 ಹೆಕ್ಟೇರ್ ಪ್ರದೇಶಕ್ಕೆ ನೀರುಣಿಸುತ್ತಿದೆ. ಹಾಗಾಗಿ ಜಲಾಶಯ ಭರ್ತಿಯಾಗುತ್ತಿದ್ದಂತೆ ಶಿಕಾರಿಪುರ ಜನತೆ ಹರ್ಷ ವ್ಯಕ್ತಪಡಿಸುತ್ತಾರೆ.
ಮೈಸೂರು ಮಹಾರಾಜರು 1936ರಲ್ಲಿ ಅಂಜನಾಪುರ ಜಲಾಶಯವನ್ನು ನಿರ್ಮಿಸಿದರು. 1600 ಮೀಟರ್ ಮಣ್ಣಿನ ಏರಿ ಹೊಂದಿದ್ದು, 21 ಅಡಿ ಎತ್ತರವಿದೆ. ಜಲಾಶಯ ಭರ್ತಿಯಾದ ವಿಚಾರ ತಿಳಿಯುತ್ತಿದ್ದಂತೆ ಸುತ್ತಮುತ್ತಲ ಗ್ರಾಮಸ್ಥರು ಅಂಜನಾಪುರ ಜಲಾಶಯಕ್ಕೆ ಬಂದು ಕಣ್ತುಂಬಿಕೊಳ್ಳುತ್ತಿದ್ದಾರೆ.
ಇದನ್ನೂ ಓದಿ » ಭದ್ರಾ ಜಲಾಶಯದ ಒಳ ಹರಿವು ತುಸು ಹೆಚ್ಚಳ, ಇವತ್ತು ಎಷ್ಟಿದೆ?
LATEST NEWS
- ಇವತ್ತು ರಂಗ ಪಂಚಮಿ, ಈ ದಿನ ಯಾವ್ಯಾವ ಶುಭ ಸಮಯ ಎಷ್ಟೊತ್ತಿಗಿದೆ?

- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






