ಶಿವಮೊಗ್ಗ ಲೈವ್.ಕಾಂ | SHIKARIPURA NEWS | 18 JUNE 2021
ಶಿಕಾರಿಪುರ ತಾಲೂಕಿನ ಜೀವನಾಡಿ ಅಂಜನಾಪುರ ಜಲಾಶಯದ ನೀರಿನ ಮಟ್ಟ ಹೆಚ್ಚಳವಾಗಿದೆ. ಈಗ ಜಲಾಶಯದ ನೀರಿನ ಮಟ್ಟ 11 ಅಡಿಗೆ ಏರಿಕೆಯಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಅಂಜನಾಪುರ ಜಲಾಶಯಕ್ಕೆ 650 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಈ ಬಾರಿ ಮಳೆ ಶುರುವಾದಾಗಿನಿಂದ ಎರಡೂವರೆ ಅಡಿಯಷ್ಟು ನೀರು ಬಂದಿದೆ. ಇದೆ ರೀತಿ ಮಳೆ ಮುಂದುವರೆದರೆ ಜಲಾಶಯದ ಒಳ ಹರಿವು ಹೆಚ್ಚಳವಾಗುವ ಸಾಧ್ಯತೆ ಇದೆ. ಕಳೆದ ವರ್ಷ ಇದೆ ಹೊತ್ತಿನ 9 ಅಡಿಯಷ್ಟು ನೀರು ಭರ್ತಿಯಾಗಿತ್ತು.
ಈ ಜಲಾಶಯ 1.82 ಟಿಎಂಸಿಯಷ್ಟು ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿದೆ. 6,736 ಎಕರೆ ಅಚ್ಚುಕಟ್ಟು ಪ್ರದೇಶ ಹೊಂದಿದೆ. ಶಿಕಾರಿಪುರ ಮತ್ತು ಶಿರಾಳಕೊಪ್ಪ ಪಟ್ಟಣದ ಕುಡಿಯುವ ನೀರಿನ ಮೂಲವಾಗಿದೆ. ಹುಂಚಾ, ಹಾದಿಗಲ್ಲು, ರಿಪ್ಪನ್‍ಪೇಟೆ ಭಾಗದಲ್ಲಿ ಹೆಚ್ಚು ಮಳೆಯಾದರೆ ಅಂಜನಾಪುರ ಜಲಾಶಯದ ಒಳ ಹರಿವು ಹೆಚ್ಚಾಗಲಿದೆ.
ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]