ಶಿಕಾರಿಪುರ: ಅಂಜನಾಪುರ ಮತ್ತು ಅಂಬ್ಲಿಗೋಳ ಅಚ್ಚುಕಟ್ಟು ಪ್ರದೇಶದ ರೈತರು ಮುಂಗಾರು ಬೆಳೆ ಬೆಳೆಯದೆ ನೀರಾವರಿ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಕಾರ್ಯಪಾಲಕ ಎಂಜಿನಿಯರ್ ಪತ್ರಿಕಾ ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.
ರಾಜ್ಯಾದ್ಯಂತ ಜಲಾಶಯಗಳಲ್ಲಿ ಒಳಹರಿವು ಸಂಪೂರ್ಣ ಕುಸಿದಿದೆ. ಎಲ್ ನಿನೋ ಪ್ರಭಾವದಿಂದ ಬರ ಪರಿಸ್ಥಿತಿ ಎದುರಾಗಿರುವುದರಿಂದ, ಅಂಜನಾಪುರ ಹಾಗೂ ಅಂಬ್ಲಿಗೋಳ ಜಲಾಶಯಗಳ ನೀರನ್ನು ನಂಬಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಯಾವುದೇ ಬೆಳೆಗಳನ್ನು ಬೆಳೆಯದಂತೆ ನೀರಾವರಿ ಇಲಾಖೆಯು ರೈತರಿಗೆ ಮನವಿ ಮಾಡಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಲಭ್ಯವಿರುವ ನೀರನ್ನು ಕೇವಲ ಕುಡಿಯುವ ನೀರಿನ ಉದ್ದೇಶಕ್ಕೆ ಮಾತ್ರ ಕಾಯ್ದಿರಿಸಬೇಕಾದ ತುರ್ತು ಪರಿಸ್ಥಿತಿ ಉದ್ಭವಿಸಿರುವುದರಿಂದ, ಜಲಾಶಯಗಳನ್ನು ಅವಲಂಬಿಸಿ ಬೆಳೆ ಹಾಕಬೇಡಿ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ ಎಂದು ಕಾರ್ಯಪಾಲಕ ಎಂಜಿನಿಯರ್ ತಿಳಿಸಿದ್ದಾರೆ.
