ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 4 ನವೆಂಬರ್ 2019
ಐದು ಕ್ವಿಂಟಾಲ್ ಅಡಕೆ ಕಳ್ಳತನ ಮಾಡಿದ್ದ ಗ್ಯಾಂಗ್ ಒಂದನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ರಾತ್ರಿ ಗಸ್ತು ತಿರುಗುವಾಗ ಅನುಮಾನಾಸ್ಪದವಾಗಿ ವರ್ತಿಸಿದವರನ್ನು ಹಿಡಿದು, ವಿಚಾರಣೆ ನಡೆಸಿದಾಗ, ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿದೆ.

ಶಿಕಾರಿಪುರದ ಚುರ್ಚುಗುಂಡಿ ಬಳಿ ಗಸ್ತು ತಿರುಗುತ್ತಿದ್ದ ಪೊಲೀಸ್ ವಾಹನ ಕಂಡು ಬೊಲೆರೋ ವಾಹನ ಮತ್ತು ಬೈಕ್’ನಲ್ಲಿ ಪರಾರಿಯಾಗಲು ಯತ್ನಿಸಿದ ಮೂವರನ್ನು ತಡೆದು ನಿಲ್ಲಿಸಲಾಗಿದೆ. ಇವರ ವಿಚಾರಣೆ ನಡೆಸಿದಾಗ ಹಲವು ಕಡೆ ಅಡಕೆ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಆ ಬಳಿಕ ಮತ್ತಿಬ್ಬರನ್ನು ಬಂಧಿಸಲಾಗಿದೆ.
ಹಾವೇರಿಯ ಜೈಲಾನಿ, ಇಸ್ಮಾಯಿಲ್, ಹಜರತ್ ಸಾಬ್, ಮೌಲಾಲಿ ಸಿರ್ಸಿ ಮತ್ತು ಶುಭಂ ರಜಪೂತ್ ಗೌಳಿ ಎಂಬುವವರನ್ನು ಬಂಧಿಸಲಾಗಿದೆ. ಬಂಧಿತರಿಂದ ಕಳ್ಳತನ ಮಾಡಿದ್ದ ಐದು ಕ್ವಿಂಟಾಲ್ ಅಡಕೆ ವಶಕ್ಕೆ ಪಡೆಯಲಾಗಿದೆ. ಇದರ ಮೌಲ್ಯ 1.67 ಲಕ್ಷ ಎಂದು ಪೊಲೀಸರು ತಿಳಿಸಿದ್ದಾರೆ. ಕೃತ್ಯಕ್ಕೆ ಬಳಸಿದ್ದ ಬೈಕ್ ಮತ್ತು ಎರಡು ಬೊಲೇರೊ ವಾಹನಗಳನ್ನು ಸೀಜ್ ಮಾಡಲಾಗಿದೆ.
ಆರೋಪಿಗಳ ಬಂಧನದಿಂದ ನಾಲ್ಕು ಪ್ರಕರಣಗಳಿಗೆ ಭೇದಿಸಿದಂತಾಗಿದೆ. ಶಿಕಾರಿಪುರ ಗ್ರಾಮಾಂತರ ಠಾಣೆ ಪಿಎಸ್ಐ ಶೋಭಾರಾಣಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






