SHIVAMOGGA LIVE NEWS | 8 DECEMBER 2023
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
SHIKARIPURA : ಮನೆ ಮುಂದೆ ಇರಿಸಿದ್ದ 3.50 ಕ್ವಿಂಟಾಲ್ ಅಡಿಕೆ ಕಳ್ಳತನ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಗೆ 5.14 ಕ್ವಿಂಟಾಲ್ ಒಣ ಅಡಿಕೆ, ಒಂದು ಬೊಲೇರೋ ಕಾರು ವಶಕ್ಕೆ ಪಡೆಯಲಾಗಿದೆ.
ಭಟ್ಕಳದ ಅಬ್ರಾರ್ ಶೇಖ್ (21), ಇಮ್ರಾನ್ (20), ಅಬ್ದುಲ್ ವಾಹೀದ್ ತಾರ್ (22) ಬಂಧಿತರು.
3 ಕ್ವಿಂಟಾಲ್‌ಗಾಗಿ ತನಿಖೆ ವೇಳೆ 5 ಕ್ವಿಂಟಾಲ್ ಪತ್ತೆ
ಶಿರಾಳಕೊಪ್ಪ ಸಮೀಪದ ಬಳ್ಳಿಗಾವಿ ಗ್ರಾಮದ ರಮೇಶ್ ಎಂಬುವವರು ತಮ್ಮ ಮನೆ ಮುಂಭಾಗದ ಕಟ್ಟೆ ಮೇಲೆ 3.50 ಕ್ವಿಂಟಾಲ್ ಒಣ ಅಡಿಕೆ ಇಟ್ಟಿದ್ದರು. ಇದರ ಮೌಲ್ಯ 1.45 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ನ.17ರಂದು ಅಡಿಕೆ ಕಳ್ಳತನವಾಗಿತ್ತು. ಶಿರಾಳಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತನಿಖೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಶಿರಾಳಕೊಪ್ಪ ಮತ್ತು ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಎರಡು ಪ್ರಕರಣ ಸಂಬಂಧ ಆರೋಪಿಗಳಿಂದ ಅಡಿಕೆ ವಶಕ್ಕೆ ಪಡೆಯಲಾಗಿದೆ. ಹಾಗಾಗಿ 5.14 ಕ್ವಿಂಟಾಲ್ ಅಡಿಕೆ ವಶಪಡಿಸಿಕೊಳ್ಳಲಾಗಿದೆ.
ಶಿಕಾರಿಪುರ ಡಿವೈಎಸ್‌ಪಿ ಶಿವಾನಂದ ಮದರಖಂಡಿ, ಶಿಕಾರಿಪುರ ಟೌನ್ ಇನ್ಸ್‌ಪೆಕ್ಟರ್ ರುದ್ರೇಶ್ ಮೇಲ್ವಿಚಾರಣೆ ನಡೆಯಲ್ಲಿ ತನಿಖೆ ನಡೆಸಲಾಗಿತ್ತು. ಶಿರಾಳಕೊಪ್ಪ ಠಾಣೆ ಪಿಎಸ್‌ಐ ಮಂಜುನಾಥ ಕುರಿ ನೇತೃತ್ವದಲ್ಲಿ ಸಿಬ್ಬಂದಿ ಸಂತೋಷ್, ಸಲ್ಮಾನ್ ಖಾನ್, ಕಾರ್ತಿಕ್, ಅಶೋಕ್ ನಾಯ್ಕ್, ನಾಗರಾಜ, ಜಿಲ್ಲಾ ಪೊಲೀಸ್ ಕಛೇರಿಯ ತಾಂತ್ರಿಕ ವಿಭಾಗದ ಸಿಬ್ಬಂದಿ ಗುರುರಾಜ್, ಇಂದ್ರೇಶ್, ವಿಜಯ್ ಅವರನ್ನು ಒಳಗೊಂಡ ತನಿಖಾ ತಂಡ ಆರೋಪಿಗಳನ್ನು ಬಂಧಿಸಿದೆ.
ಇದನ್ನೂ ಓದಿ – ಮಾಚೇನಹಳ್ಳಿಯಲ್ಲಿ ಕಂಪನಿ ಮೇಲೆ ಅಧಿಕಾರಿಗಳಿಂದ ದಾಳಿ, ಕಾರಣವೇನು?
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






