‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

jnanasoudha Karkala

ಶಿಕಾರಿಪುರ: ಸಾರಥಿ ಯೋಜನೆಯಡಿ ಸಾಲ ಮಂಜೂರಾಗದಂತೆ ತಡೆದಿದ್ದೀಯಾ ಎಂದು ಆರೋಪಿಸಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ (slippers) ನಡೆಸಿರುವ ಘಟನೆ ತಾಲೂಕಿನ ಕಾಗಿನೆಲ್ಲಿ ಗ್ರಾಮದಲ್ಲಿ ನಡೆದಿದೆ.

ಇದನ್ನೂ ಓದಿ – ಫಾರ್ಚುನರ್‌ ಕಾರಿನಲ್ಲಿ ಬಂದು ಇಂಜಿನಿಯರ್‌ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್‌?

ಕಾಗಿನೆಲ್ಲಿ ಗ್ರಾಮದ ನಾಗರಾಜ್.ಎ.ಕೆ ಎಂಬುವವರು ಗ್ರಾಮದ ವಾಲ್ಮೀಕಿ ಕಾಲೋನಿಯಲ್ಲಿ ಮೃತಪಟ್ಟಿದ್ದ ಮಹಿಳೆಯ ಶವದ ದರ್ಶನಕ್ಕೆ ಬಿ.ಆರ್. ಅಂಬೇಡ್ಕರ್ ಸರ್ಕಲ್ ಮೂಲಕ ಹೋಗುತ್ತಿದ್ದರು. ಈ ವೇಳೆ ಅದೇ ವ್ಯಕ್ತಿಯೊಬ್ಬ ನಾಗರಾಜ್ ಅವರನ್ನು ಅಡ್ಡಗಟ್ಟಿದ್ದಾನೆ ಎಂದು ಆರೋಪಿಸಲಾಗಿದೆ. ನನ್ನ ಅಳಿಯನಿಗೆ ಸಾರಥಿ ಯೋಜನೆಯಡಿ ಸಾಲ ಮಂಜೂರಾಗಿತ್ತು. ನೀನೆ ಶಾಸಕರಿಗೆ ಹೇಳಿ ತಡೆದಿದ್ದೀಯ ಎಂದು ಅವಾಚ್ಯ ಶಬ್ದಗಳಿಂದ ಆ ವ್ಯಕ್ತಿ ನಿಂದಿಸಿದ್ದಾರೆ. ಅಲ್ಲದೆ ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ.

Crime-News-General-Image

ಈ ಘಟನೆ ಸಂಬಂಧ ನಾಗರಾಜ್ ಅವರು ನ್ಯಾಯಾಲಯದ ಅನುಮತಿ ಪಡೆದು ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Sunrise Facility Services, Sri sai Trust Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 8, 2026

Leave a Comment