ಅಂಬಲಿಗೋಳ ಜಲಾಶಯ ಭರ್ತಿ, ಬಾಗಿನ ಅರ್ಪಣೆ, ಸಂಸದ ರಾಘವೇಂದ್ರ, ಶಾಸಕ ವಿಜಯೇಂದ್ರ ಏನೆಲ್ಲ ಹೇಳಿದರು?

ಶಿಕಾರಿಪುರ: ತಾಲೂಕಿನ ರೈತರ ಜೀವನಾಡಿಯಾಗಿರುವ ಅಂಬಲಿಗೋಳ ಜಲಾಶಯವು ಭರ್ತಿಯಾಗಿ ಕೋಡಿಬಿದ್ದಿರುವ ಹಿನ್ನೆಲೆಯಲ್ಲಿ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಜಲಾಶಯಕ್ಕೆ ಬಾಗಿನ ಅರ್ಪಿಸಿ ವಿಶೇಷ ಪೂಜೆ ಸಲ್ಲಿಸಿದರು.➤ ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಬಳಿಕ ಮಾತನಾಡಿದ ಸಂಸದ ಬಿ.ವೈ. ರಾಘವೇಂದ್ರ, ಅಡಿಕೆ ಅಕ್ರಮ ಆಮದು ತಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಗಿದ್ದು, ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.

BY-Raghavendra-and-BY-Vijayendra-offer-Bagina-to-Ambligola-Dam-in-Shikaripura

ದೇಶದಲ್ಲಿ ಒಟ್ಟು 7 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಬೆಳೆಯುತ್ತಿದ್ದರೆ, ನಮ್ಮ ರಾಜ್ಯದಲ್ಲೇ 5 ಲಕ್ಷ ಹೆಕ್ಟೇರ್‌ನಲ್ಲಿ ಅಡಿಕೆ ಬೆಳೆಯಲಾಗುತ್ತಿದೆ. ಇದರಲ್ಲಿ ಶಿವಮೊಗ್ಗ ಜಿಲ್ಲೆಯಲ್ಲೇ 2 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಸೇರಿದೆ. ಅಡಿಕೆಗೆ ಸೂಕ್ತ ಬೆಂಬಲ ಬೆಲೆ ನೀಡುವಂತೆ ಕೇಂದ್ರ ಸರ್ಕಾರದ ಗಮನ ಸೆಳೆಯಲಾಗಿದೆ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕಳೆದ 12 ವರ್ಷಗಳಲ್ಲಿ ಅಡಿಕೆಗೆ ಸ್ಥಿರವಾದ ಬೆಲೆ ದೊರೆಯುವಂತೆ ಕ್ರಮ ಕೈಗೊಂಡಿದೆ ಎಂದರು.

ನೀರಾವರಿ ಯೋಜನೆಗಳಿಗೆ ಒತ್ತು

ಶಾಸಕ ಬಿ.ವೈ. ವಿಜಯೇಂದ್ರ ಮಾತನಾಡಿ, ಸದ್ಯದ ಹವಾಮಾನದ ಸಂದಿಗ್ಧ ಪರಿಸ್ಥಿತಿಯಲ್ಲೂ ಜಲಾಶಯ ತುಂಬಿರುವುದು ರೈತರ ಸೌಭಾಗ್ಯ. ರೈತರು ನೀರಿನ ಮಹತ್ವ ಅರಿತು, ನೀರನ್ನು ಪೋಲು ಮಾಡದೆ ಆಚುಕಟ್ಟಾಗಿ ಬಳಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ತುಂಗಾ ನದಿಯಿಂದ ಅಂಜನಾಪುರಕ್ಕೆ ನೀರು ತರುವ ಪ್ರಯತ್ನ ಸಾಮಾನ್ಯವಲ್ಲ. ಕುಡಿಯುವ ನೀರಿನ ಜೊತೆಗೆ ಕೆರೆ-ಕಟ್ಟೆಗಳನ್ನು ತುಂಬಿಸುವ ಮೂಲಕ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆಧುನಿಕ ಭಗೀರಥ ಎನಿಸಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಹನುಮಂತಪ್ಪ, ಎಂಎಡಿಬಿ ಮಾಜಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಸಿದ್ದಲಿಂಗಪ್ಪ ನಿಂಬೇಗೊಂದಿ, ಮುಖಂಡರಾದ ಹುಲ್ಮಾರ್ ಮಹೇಶ್, ರುದ್ರಮುನಿ ಚುರ್ಚಿಗುಂಡಿ, ಗಾಯತ್ರಿ ಮಲ್ಲಪ್ಪ ಸೇರಿದಂತೆ ಹಲವು ಪ್ರಮುಖರು ಹಾಗೂ ಅಚ್ಚುಕಟ್ಟು ಪ್ರದೇಶದ ನೂರಾರು ರೈತರು ಉಪಸ್ಥಿತರಿದ್ದರು.