ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIKARIPURA NEWS, 26 SEPTEMBER 2024 : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ದ್ವೇಷದ ರಾಜಕಾರಣ ಖಂಡಿಸಿ ತಾಲೂಕು ಅಹಿಂದ ಯುವ ಘಟಕ ನೀಡಿದ್ದ ಬಂದ್ (Bandh) ಕರೆಗೆ ಶಿಕಾರಿಪುರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಈ ಮಧ್ಯೆ ಅಹಿಂದ ಮುಖಂಡರು ಶಿಕಾರಿಪುರ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
» ಬಂದ್ಗೆ ಹೇಗಿತ್ತು ಪ್ರತಿಕ್ರಿಯೆ? ಬಂದ್ ಕರೆ ಹಿನ್ನೆಲೆ ಶಿಕಾರಿಪುರ ಪಟ್ಟಣದಲ್ಲಿ ಬೆಳಗ್ಗೆಯಿಂದಲೇ ಅಂಗಡಿ ಮುಂಗಟ್ಟು ಮುಚ್ಚಿದ್ದವು. ಪಟ್ಟಣದ ಹೊರ ವಲಯದಲ್ಲಿ ಅಂಗಡಿಗಳು, ಕೆಲವು ಹೊಟೇಲ್ಗಳ ಬಾಗಿಲು ತೆರೆದಿದ್ದವು. ಬಸ್ ನಿಲ್ದಾಣದ ಬಸ್ ಸಂಚಾರ ವಿರಳವಾಗಿತ್ತು. ಶಾಲೆ, ಕಾಲೇಜು, ಸರ್ಕಾರಿ ಕಚೇರಿಗಳು, ಬ್ಯಾಂಕ್ಗಳು ಎಂದಿನಂತೆ ಕಾರ್ಯನಿರ್ವಹಿಸಿದವು. ಪಟ್ಟಣದ ಹೃದಯ ಭಾಗದಲ್ಲಿ ಬಹುತೇಕ ಬಂದ್ ಆಗಿತ್ತು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಅಹಿಂದ ಮುಖಂಡರಿಂದ ಪ್ರತಿಭಟನೆ
ಇದೇ ವೇಳೆ ಅಹಿಂದ ಮುಖಂಡರು ಶಿಕಾರಿಪುರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭ ಮಾತನಾಡಿದ ಅಹಿಂದ ಮುಖಂಡ ನಾಗರಾಜಗೌಡ ಜೆಡಿಎಸ್, ಬಿಜೆಪಿ ಪಕ್ಷಗಳ ವಿರುದ್ಧ ಹರಿಹಾಯ್ದರು.
ಈ ಹಿಂದೆ ಸಿದ್ದರಾಮಯ್ಯ ಅವರು 5 ವರ್ಷ ಕಳಂಕರಹಿತವಾಗಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ್ದರು. ಈ ಬಾರಿ ಐದು ಗ್ಯಾರಂಟಿಗಳನ್ನು ಜಾರಿಗೆ ತರಲಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಗ್ಯಾರಂಟಿ ಯೋಜನೆಯ ಲಾಭ ಲಭಿಸುತ್ತಿದೆ. ಇದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನಪ್ರಿಯತೆ ಹೆಚ್ಚಾಗಿದೆ. ಇದನ್ನು ಸಹಿಸಲಾಗದೆ ಬಿಜೆಪಿ, ಜೆಡಿಎಸ್ ನಾಯಕರು ಅವರ ವಿರುದ್ಧ ಆರೋಪ ಹೊರಿಸಿ ಆಡಳಿತ ನಡೆಸಲು ಬಿಡುತ್ತಿಲ್ಲ ಎಂದು ನಾಗರಾಜಗೌಡ ಆರೋಪಿಸಿದರು.
ಅಹಿಂದ ಯುವ ಘಟಕದ ಅಧ್ಯಕ್ಷ ನಗರದ ಮಾಲ್ತೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವರಾಮ್ ಪಾರಿವಾಳ, ಪ್ರಮುಖರಾದ ಗೋಣಿ ಮಾಲ್ತೇಶ್, ಉಳ್ಳಿ ದರ್ಶನ್, ಗೋಣಿ ಪ್ರಕಾಶ್, ಪಾಲಾಕ್ಷಪ್ಪ, ನಗರದ ರವಿಕಿರಣ್, ಶಿವು ಹುಲ್ಮಾರ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ » ರಾತ್ರೋರಾತ್ರಿ ನೂರಾರು ಅಡಿಕೆ ಮರಗಳಿಗೆ ಗರಗಸ ಹಾಕಿದ ದುಷ್ಕರ್ಮಿಗಳು