ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 25 MAY 2024
SHIKARIPURA : ಈಸೂರು ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಕರಡಿಯನ್ನು (BEAR) ಕಾಡಿಗೆ ಅಟ್ಟುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಶುಕ್ರವಾರ ಸಂಜೆ ಕಾರ್ಯಾಚರಣೆ ನಡೆಸಿ ಕರಡಿಯನ್ನು ಕಾಡಿಗಟ್ಟಲಾಗಿದೆ.
ಈಸೂರು ಗ್ರಾಮದಲ್ಲಿ ಗುರುವಾರ ಕರಡಿ ಪ್ರತ್ಯಕ್ಷವಾಗಿತ್ತು. ಮಾಹಿತಿ ತಿಳಿದು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳದಲ್ಲೆ ಮೊಕ್ಕಾಂ ಹೂಡಿ ಕರಡಿ ಕಾಡಿಗಟ್ಟುವ ಕಾರ್ಯಾಚರಣೆ ನಡೆಸಿದರು. ಶುಕ್ರವಾರ ಸಂಜೆ ಗ್ರಾಮದ ವೀರಭದ್ರೇಶ್ವರ ಸ್ವಾಮಿ ದೇಗುಲದ ಹಿಂಭಾಗ ಕೆರೆಯಲ್ಲಿ ಕರಡಿ ಕಾಣಿಸಿಕೊಂಡಿತ್ತು. ಕೆರೆ ಸುತ್ತಲು ಬಲೆ ಹಾಕಿ, ಕರಡಿ ಕಾಡಿಗಟ್ಟುವ ಪ್ರಯತ್ನ ನಡೆಸಲಾಯಿತು.
ಇದನ್ನೂ ಓದಿ – ಇನ್ನು 3 ಗಂಟೆ ಶಿವಮೊಗ್ಗ ಸೇರಿ ವಿವಿಧೆಡೆ ಅಲರ್ಟ್, ಇವತ್ತು ಎಷ್ಟಿರುತ್ತೆ ತಾಪಮಾನ? ಇಲ್ಲಿದೆ ರಿಪೋರ್ಟ್
ಕಾರ್ಯಾಚರಣೆ ಸಂದರ್ಭ ಅರಣ್ಯ ಇಲಾಖೆ ಸಿಬ್ಬಂದಿಯೊಬ್ಬರ ಮೇಲೆ ಕರಡಿ ದಾಳಿಗೆ ಮುಂದಾಯಿತು. ಜನರ ಕೂಗಾಟ, ಅರಣ್ಯ ಇಲಾಖೆ ಸಿಬ್ಬಂದಿ ಕೈಯಲ್ಲಿಯದ್ದ ಲಾಠಿ ಕಂಡು ಪುನಃ ಕೆರೆ ದಂಡೆ ಮೇಲಿನ ಪೊದೆಯಲ್ಲಿ ಅವಿತು ಕೂತಿತ್ತು. ಸಂಜೆ ಕಾರ್ಯಾಚರಣೆ ನಡೆಸಿ ಸಮೀಪದ ಗೊಬ್ಬರದ ಹೊಂಡ ಅರಣ್ಯ ಪ್ರದೇಶಕ್ಕೆ ಕರಡಿಯನ್ನು ಅಟ್ಟಲಾಗಿದೆ.
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















