ಶಿವಮೊಗ್ಗ ಲೈವ್.ಕಾಂ | SHIRALAKOPPA NEWS | 11 ಸೆಪ್ಟಂಬರ್ 2020
ಮೂರು ಬೈಕುಗಳ ಕಳವು ಮಾಡಿದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಶಿರಾಳಕೊಪ್ಪ ಪೊಲೀಸರು ಕಳ್ಳನನ್ನು ಅರೆಸ್ಟ್ ಮಾಡಿದ್ದು, ಈತನಿಂದ ಒಂದು ಲಕ್ಷ ಮೌಲ್ಯದ ಮೂರು ಬೈಕುಗಳನ್ನು ವಶಕ್ಕೆ ಪಡೆಯಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ತಡಗಣಿ ಗ್ರಾಮದ ಮಹೇಶ್ ಅಲಿಯಾಸ್ ಕಾಲುಕೇಜಿ (26) ಬಂಧಿತ. ಈತ ಮೂರು ಬೈಕುಗಳನ್ನು ಕಳವು ಮಾಡಿದ್ದ.
ಶಿರಾಳಕೊಪ್ಪ ಪಶು ವೈದ್ಯಕೀಯ ಆಸ್ಪತ್ರೆ ಹೋಂಡಾ ಡೀಮ್ಸ್ ಯುಗ, ಚಿಕ್ಕೇರಿಗೆ ಹೊಗುವ ರಸ್ತೆಯ ಚೌಡಮ್ಮನಕೆರೆ ಬಳಿ ಹೀರೋ ಹೋಂಡಾ ಸ್ಪ್ಲೆಂಡರ್ ಪ್ಲಸ್, ಶಿಕಾರಿಪುರ ಆಡಳಿತ ಕಚೇರಿ ಮುಂಭಾಗ ನಿಲ್ಲಿಸಿದ್ದ ಪ್ಯಾಷನ್ ಪ್ರೋ ಬೈಕ್‍ಗಳ ಕಳ್ಳತನ ಮಾಡಿದ್ದ. ಇವುಗಳನ್ನು ವಶಕ್ಕೆ ಪಡೆಯಲಾಗಿದೆ.
ಶಿಕಾರಿಪುರ ಉಪ ವಿಭಾಗ ಎಎಸ್‍ಪಿ ಶ್ರೀನಿವಾಸಲು ಮಾರ್ಗದರ್ಶನದಲ್ಲಿ, ಶಿಕಾರಿಪುರ ಸರ್ಕಲ್ ಇನ್ಸ್‍ಪೆಕ್ಟರ್ ಗುರುರಾಜ್ ಎನ್ ಮೈಲಾರ್, ಶಿರಾಳಕೊಪ್ಪ ಪಿಎಸ್‍ಐ ಮತ್ತು ಸಿಬ್ಬಂದಿಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]