ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
ಶಿವಮೊಗ್ಗ ಲೈವ್.ಕಾಂ | 11 ಮೇ 2019
ಬಿಜೆಪಿ ಕಾರ್ಯಕರ್ತರೊಬ್ಬರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿರುವುದನ್ನು ಖಂಡಿಸಿ, ಶಿಕಾರಿಪುರ ಪೊಲೀಸ್ ಠಾಣೆ ಮುಂಭಾಗ ಬಿಜೆಪಿ ಕಾರ್ಯಕರ್ತರು ಧರಣಿ ನಡೆಸುತ್ತಿದ್ದಾರೆ. ಬಿಜೆಪಿ ಮುಖಂಡ ಗುರುಮೂರ್ತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾರ್ಯಕರ್ತರು, ಹಲ್ಲೆಕೋರರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.
ಬಿಜೆಪಿ ಕಾರ್ಯಕರ್ತ ರಾಜು ಎಂಬುವವರ ಮೇಲೆ, ಇವತ್ತು ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಅರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಹಲ್ಲೆ ನಡೆಸಿದವರನ್ನು ಕೂಡಲೇ ಬಂಧಿಸಿ, ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದರು.
ಹಲ್ಲೆ ಮಾಡಿದವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ, ಬೆಳಗ್ಗೆಯಿಂದ ಶಿಕಾರಿಪುರ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದಾರೆ. ಜಿಲ್ಲಾ ರಕ್ಷಣಾಧಿಕಾರಿ ಸ್ಥಳಕ್ಕೆ ಭೇಟಿ ನೀಡಬೇಕು ಎಂದೂ ಪ್ರತಿಭಟನಾನಿರತರು ಆಗ್ರಹಿಸಿದ್ದಾರೆ.
ಹಲ್ಲೆಗೊಳಗಾಗಿರುವ ಬಿಜೆಪಿ ಕಾರ್ಯಕರ್ತ ರಾಜು ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com






