ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 15 MAY 2023
SHIMOGA : ಚೋರಡಿ ಸಮೀಪ ಖಾಸಗಿ ಬಸ್‌ಗಳು (BUS) ಡಿಕ್ಕಿಯಾಗಿ ಗಾಯಗೊಂಡಿದ್ದ ಬಹುತೇಕರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇತ್ತ ಅಪಘಾತದಲ್ಲಿ ಮೃತಪಟ್ಟವರ ಮನೆಗೆ ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು.

ಮೇ 11ರಂದು ಶಿವಮೊಗ್ಗ ತಾಲೂಕು ಚೋರಡಿ ಸಮೀಪ ಎರಡು ಖಾಸಗಿ ಬಸ್‌ಗಳು (BUS) ಡಿಕ್ಕಿಯಾಗಿತ್ತು. ಅದೇ ದಿನ ಶಿಕಾರಿಪುರ ತಾಲೂಕು ಈಸೂರು ಗ್ರಾಮದ ಅರುಣ್ ಕುಮಾರ್ (40) ಮತ್ತು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ತಿಪ್ಪೇಸ್ವಾಮಿ (50) ಮೃತಪಟ್ಟಿದ್ದರು. ಮರುದಿನ ಚಿಕ್ಕಜೋಗಿ ಹಳ್ಳಿಯ ಮಹೇಶ್ವರಪ್ಪ ಕೊನೆಯುಸಿರೆಳೆದಿದ್ದರು. ಇದರಿಂದ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿತ್ತು.
ಇದನ್ನೂ ಓದಿ – ಜನ, ಜನಪ್ರತಿನಿಧಿಗಳು, ಮೆಗ್ಗಾನ್ ಸಿಬ್ಬಂದಿ, ಪೊಲೀಸರಿಂದಾಗಿ ಉಳಿಯಿತು ಹಲವರ ಪ್ರಾಣ, ಸಿಕ್ತು ಸೂಕ್ತ ಚಿಕಿತ್ಸೆ, ಹೇಗದು?
ಚೇತರಿಸಿಕೊಂಡ ಗಾಯಾಳುಗಳು ಡಿಸ್ಚಾರ್ಜ್
ಘಟನೆಯಲ್ಲಿ ಗಾಯಗೊಂಡಿದ್ದವರಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಲ್ಲಿ ಚಿಕಿತ್ಸೆ ಪಡೆದ 20 ಮಂದಿ ಚೇತರಿಸಿಕೊಂಡಿದ್ದು ಡಿಸ್ಚಾರ್ಜ್ ಆಗಿದ್ದಾರೆ. ಸಣ್ಣಪುಟ್ಟ ಗಾಯವಾಗಿದ್ದ 9 ಮಂದಿ ಮೇ 12ರಂದೇ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಇನ್ನು, ಗಂಭೀರವಾಗಿ ಗಾಯಗೊಂಡಿರುವ ಒಂದು ವರ್ಷದ ಮಗು ಸೇರಿದಂತೆ ಐವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರಿಗೆ ಚಿಕಿತ್ಸೆ ಮುಂದುವರೆದಿದೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ಮೃತರ ಮನೆಗೆ ವಿಜಯೇಂದ್ರ ಭೇಟಿ
ಇನ್ನು, ಘಟನೆಯಲ್ಲಿ ಮೃತಪಟ್ಟಿದ್ದ ಚಾಲಕ ಅರುಣ್ ಕುಮಾರ್ ಮತ್ತು ಚಿಕ್ಕಜೋಗಿಹಳ್ಳಿಯ ಮಹೇಶ್ವರಪ್ಪ ಮನೆಗಳಿಗೆ ಶಿಕಾರಿಪುರದ ಶಾಸಕ ಬಿ.ವೈ.ವಿಜಯೇಂದ್ರ ಅವರು ಭೇಟಿ ನೀಡಿದ್ದರು. ಕುಟುಂಬದವರಿಗೆ ಸಾಂತ್ವನ ಹೇಳಿದರು. ಪ್ರಮುಖರಾದ ಕೆ.ಎಸ್.ಗುರುಮೂರ್ತಿ, ಕೊರಲಹಳ್ಳಿ ನಾಗರಾಜ್ ಇದ್ದರು.
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP



