ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIKARIPURA NEWS | 14 ಫೆಬ್ರವರಿ 2022
ಶಿವಮೊಗ್ಗ – ಶಿಕಾರಿಪುರ- ರಾಣೇಬೆನ್ನೂರು ರೈಲ್ವೆ ಯೋಜನೆಯ ವಿವಿಧ ಕೆಲಸಗಳು ಪ್ರಾರಂಭವಾಗಿದೆ. ಶಿಕಾರಿಪುರದಲ್ಲಿ ಸ್ವಾತಂತ್ರ್ಯ ನಂತರ ಮೊದಲನೆ ರೈಲ್ವೆ ಯೋಜನೆ ಆಗುತ್ತಿದೆ. ಇದಕ್ಕೆ ಕಲ್ಲು ಹಾಕುವ ಕೆಲಸ ನಡೆದರೆ ಸಹಿಸುವುದಿಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಎಚ್ಚರಿಕೆ ನೀಡಿದರು.
ಶಿಕಾರಿಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ವತಿಯಿಂದ ಸಾಲೂರು, ತಾಳಗುಂದ ಮತ್ತು ಹರುಗುವಳ್ಳಿ ಗ್ರಾಮಗಳಲ್ಲಿ ನೂತನವಾಗಿ ನಿರ್ಮಿಸಿರುವ ಗ್ರಾಮೀಣ ಗೋದಾಮುಗಳು, ಶಿರಾಳಕೊಪ್ಪ ಉಪ ಮಾರುಕಟ್ಟೆ ಪ್ರಾಂಗಣದಲ್ಲಿ ನೂತನವಾಗಿ ನಿರ್ಮಿಸಿರುವ ‘ರೈತ ಭವನ’ ಕಟ್ಟಡವನ್ನು ಸಂಸದರಾದ ಬಿ. ವೈ. ರಾಘವೇಂದ್ರ ಅವರು ಉದ್ಘಾಟಿಸಿ ಮಾತನಾಡಿದರು.
ರಾಜಕೀಯ ಮಾಡೋಣ. ಆದರೆ ರೈಲ್ವೆ ಯೋಜನೆಯಂತಹ ಅಭಿವೃದ್ಧಿ ಕೆಲಸಕ್ಕೆ ಕಲ್ಲು ಹಾಕುವ ಕೆಲಸ ಮಾಡಬಾರದು. ಇದನ್ನು ತಾವು ಸಹಿಸುವುದಿಲ್ಲ ಎಂದು ಸಂಸದ ರಾಘವೇಂದ್ರ ತಿಳಿಸಿದರು.
ಉತ್ತಮ ಆರೋಗ್ಯ, ಶಿಕ್ಷಣ ವ್ಯವಸ್ಥೆ
ಶಿವಮೊಗ್ಗ ಜಿಲ್ಲಾ ಕೇಂದ್ರದಲ್ಲಿ ಉತ್ತಮ ಆರೋಗ್ಯ ವ್ಯವಸ್ಥೆ ಇದೆ. ನಂತರ ಶಿಕಾರಿಪುರ ತಾಲೂಕಿನಲ್ಲಿ ಹೆಚ್ಚು ಹಾಸಿಗೆ ವ್ಯವಸ್ಥೆ ಮಾಡಲಾಗಿದೆ. ರಾಜ್ಯದಲ್ಲೇ ಉತ್ತಮ ಪ್ರಥಮ ದರ್ಜೆ ಕಾಲೇಜು ಶಿಕಾರಿಪುರದ್ದಾಗಿದೆ. ಶಿಕ್ಷಣಕ್ಕೆ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದೇವೆ. ತಾಲೂಕಿನಲ್ಲಿ ಸಾವಿರಾರು ಕೋಟಿಯ ನೀರಾವರಿ ಯೋಜನೆಯ ಕೆಲಸ ಮುಗಿದಿದೆ ಎಂದರು.
ಸಿರಿಧಾನ್ಯ ವರ್ಷಾಚರಣೆ ಘೋಷಣೆ
ಕೇಂದ್ರದ ಬಜೆಟ್’ನಲ್ಲಿ ಈ ವರ್ಷ ಅಂತರ್ ರಾಷ್ಟ್ರೀಯ ಸಿರಿಧಾನ್ಯ ವರ್ಷ ಎಂದು ಘೋಷಣೆ ಮಾಡಲಾಗಿದೆ. ಇದು ಬರಿ ಘೋಷಣೆಯಾಗಿ ಉಳಿಯದೆ ನಮ್ಮ ರೈತರು ಬೆವರು ಸುರಿಸಿ ಬೆಳೆದ ಧಾನ್ಯಕ್ಕೆ ಹೆಚ್ಚಿನ ಬೆಲೆ ಸಿಗಲಿದೆ. ಸಾವಯವ ಕೃಷಿಗೆ ಆದ್ಯತೆ ನೀಡಿ ಹಣ ಇಡುವ ಕೆಲಸ ಮಾಡಿದ್ದಾರೆ. ತಿನ್ನುವ ಅನ್ನ ವಿಷ ಆಗಬಾರದೆಂದು ರಾಸಾಯನಿಕ ಮುಕ್ತ ನೈಸರ್ಗಿಕ ಕೃಷಿಗೆ ಹೆಚ್ಚು ಒತ್ತು ನೀಡಿದೆ ಎಂದು ರಾಘವೇಂದ್ರ ತಿಳಿಸಿದರು.
ಶಿಕಾರಿಪುರ ಎಪಿಎಂಸಿ ಅಧ್ಯಕ್ಷ ಬಿ.ರುದ್ರಮುನಿ, ಮಲೆನಾಡು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎಸ್, ಗುರುಮೂರ್ತಿ, ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಕೆ.ರೇವಣಪ್ಪ, DCC ಬ್ಯಾಂಕ್ ಅಧ್ಯಕ್ಷ ಎಂ.ಬಿ.ಚೆನ್ನವೀರಪ್ಪ, ಅಗಡಿ ಅಶೋಕ್, ಬಿ. ಡಿ. ಭೂಕಂತ್, ಶಿರಾಳಕೊಪ್ಪ ಪುರಸಭೆ ಅಧ್ಯಕ್ಷೆ ಮಂಜುಳಾ ಟಿ. ರಾಜು, ನಿರ್ಮಲಾ ಪರಮೇಶ್ವರಪ್ಪ, ಸುಧೀರ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ | ಶಿವಮೊಗ್ಗ – ಬೆಂಗಳೂರು ರೈಲ್ವೆ ಟೈಮಿಂಗ್ಸ್, ಯಾವ ರೈಲು ಎಷ್ಟೊತ್ತಿಗೆ ಹೊರಡುತ್ತೆ?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422