ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 20 JUNE 2024
SHIKARIPURA : ಸರ್ಕಾರಿ ಆಸ್ಪತ್ರೆಗೆ (Hospital) ಶಾಸಕ ಬಿ.ವೈ.ವಿಜಯೇಂದ್ರ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ಸೊರಬ, ಹಿರೇಕೆರೂರು, ಹೊನ್ನಾಳಿ, ನ್ಯಾಮತಿ ಸೇರಿ ವಿವಿಧ ತಾಲೂಕುಗಳಿಂದ ರೋಗಿಗಳು ಬರುತ್ತಾರೆ. ಇಲ್ಲಿ ಉತ್ತಮ ವೈದ್ಯರಿದ್ದಾರೆ. ಆದರೆ ಅದಕ್ಕೆ ಪೂರಕ ವಾತಾವರಣ ನಿರ್ಮಾಣವಾಗಬೇಕು. ವೈದ್ಯರು ಸೂಕ್ತವಾಗಿ ಸ್ಪಂದಿಸಬೇಕು ಎಂದು ಸಲಹೆ ನೀಡಿದರು.
ಸರ್ಕಾರಿ ಆಸ್ಪತ್ರೆಯಲ್ಲಿ ಯಾವುದೇ ಕೊರತೆ ಇಲ್ಲ. ಎಕ್ಸ್-ರೇ, ಸ್ಕ್ಯಾನಿಂಗ್ ಸೇರಿ ಚಿಕಿತ್ಸೆಗೆ ಪೂರಕವಾದ ಯಾವುದೇ ಉಪಕರಣಗಳು ಹಾಳಾಗಿದ್ದರೆ ತಕ್ಷಣ ದುರಸ್ಥಿ ಮಾಡಿಸಿಕೊಳ್ಳಿ. ರೋಗಿಯನ್ನು ತಕ್ಷಣ ಶಿವಮೊಗ್ಗಕ್ಕೆ ಶಿಫಾರಸು ಮಾಡುವುದಕ್ಕಿಂತ ಮೊದಲು ಇಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿ. ಏನಾದರೂ ಕೊರತೆಗಳಾದರೆ ನನ್ನ ಗಮನಕ್ಕೆ ತನ್ನಿ. ನಾನು ಆರೋಗ್ಯ ಸಚಿವರೊಂದಿಗೆ ಚರ್ಚೆ ಮಾಡುತ್ತೇನೆ ಎಂದು ಹೇಳಿದರು.
ಡೆಂಗ್ಯು ಜ್ವರ ಪ್ರಕರಣ ಹೆಚ್ಚಾಗುತ್ತಿವೆ. ಸಾರ್ವಜನಿಕರು ಸ್ವಚ್ಛತೆ ಕಡೆಗೆ ಹೆಚ್ಚಿನ ಗಮನಹರಿಸಬೇಕು. ಮಳೆಗಾಲದ ಆರಂಭದಲ್ಲಿ ಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿವೆ. ಶುದ್ಧ ಕುಡಿಯುವ ನೀರು ಮತ್ತು ಸ್ವಚ್ಛ ಪರಿಸರದ ಅಗತ್ಯವಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಅಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು ಸ್ವಚ್ಛತೆ ಮತ್ತು ಮಾರಕ ರೋಗಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಟಿಎಚ್‌ಒ ಡಾ. ನವೀದ್ ಖಾನ್, ಡಾ. ಅರುಣ್ ಕುಮಾರ್, ಡಾ. ಶ್ರೀನಿವಾಸ್, ಎಂಎಡಿಬಿ ಮಾಜಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ, ತಾಲೂಕು ಬಿಜೆಪಿ ಅಧ್ಯಕ್ಷ ಹನುಮಂತಪ್ಪ, ಯುವ ಮೋರ್ಚಾ ಅಧ್ಯಕ್ಷ ವೀರನ ಗೌಡ ಸೇರಿ ಹಲವರು ಇದ್ದರು.
ಇದನ್ನೂ ಓದಿ – ಶಿವಮೊಗ್ಗದ ಸವಳಂಗ ರಸ್ತೆ ರೈಲ್ವೆ ಮೇಲ್ಸೇತುವೆ ಪರಿಶೀಲನೆ, ಏನೆಲ್ಲ ಸೂಚನೆ ನೀಡಿದ್ರು ಸಂಸದ?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422