ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 10 JULY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIKARIPURA : ಡೆಂಗ್ಯು ಉಲ್ಬಣವಾಗಿರುವ ಹಿನ್ನೆಲೆ ಶಾಸಕ ಬಿ.ವೈ. ವಿಜಯೇಂದ್ರ ಅವರು ಶಿರಾಳಕೊಪ್ಪದ ಪಟ್ಟಣ ಸಮುದಾಯ ಆರೊಗ್ಯ ಕೇಂದ್ರಕ್ಕೆ ದಿಢೀರ್ ಭೇಟಿ (Sudden Visit) ನೀಡಿ ಪರಿಶೀಲಿಸಿದರು. ವಿವಿಧ ವಿಭಾಗಗಳಿಗೆ ತೆರಳಿ ವೀಕ್ಷಿಸಿದರು. ರೋಗಿಗಳು, ಸಂಬಂಧಿಕರ ಜೊತೆಗೆ ಮಾತನಡಿ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಉತ್ತಮ ಸೇವೆ ನೀಡಬೇಕು
ಆರೋಗ್ಯ ಕ್ಷೇತ್ರಕ್ಕೆ ಸರ್ಕಾರ ಹಲವು ಯೋಜನೆ ನೀಡುತ್ತಿದೆ. ವೈದ್ಯರು ರೋಗಿಗಳಿಗೆ ಉತ್ತಮ ಸೇವೆ ನೀಡಬೇಕು. ಆರೋಗ್ಯ ಸಿಬ್ಬಂದಿ ಜನರ ಬಗ್ಗೆ ಕಾಳಜಿ ವಹಿಸಿ ಕೆಲಸ ಮಾಡಬೇಕು ಎಂದು ವಿಜಯೇಂದ್ರ ತಿಳಿಸಿದರು. ಆಸ್ಪತ್ರೆಯಲ್ಲಿ ದಾಖಲಾದ ಒಳರೋಗಿಗಳನ್ನು ಮಾತನಾಡಿಸಿ, ಆಸ್ಪತ್ರೆಯಲ್ಲಿ ದೊರೆಯುತ್ತಿರುವ ಸೇವೆ ಮತ್ತು ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು.
50 ಹಾಸಿಗೆ ಆಸ್ಪತ್ರೆ ಕಾಮಗಾರಿ ಪರಿಶೀಲನೆ
ನಿರ್ಮಾಣ ಹಂತದಲ್ಲಿರುವ 50 ಹಾಸಿಗೆಯ ಆಸ್ಪತ್ರೆಗೆ ಭೇಟಿ ನೀಡಿ, ಕಾಮಗಾರಿ ಪರಿಶೀಲಿಸಿದರು. ಆಸ್ಪತ್ರೆಗೆ ಅಗತ್ಯವಿರುವ ಸೌಕರ್ಯಗಳ ಪಟ್ಟಿ ಹಾಗೂ ಅವಶ್ಯಕತೆ ಇರುವ ಸಿಬ್ಬಂದಿ ಪಟ್ಟಿಯನ್ನು ನೀಡಿದರೆ ಸರ್ಕಾರದಿಂದ ಮಂಜೂರು ಮಾಡಿಸುವುದಾಗಿ ವೈದ್ಯಾಧಿಕಾರಿಗಳಿಗೆ ತಿಳಿಸಿದರು.
ವೈದ್ಯಾಧಿಕಾರಿ ಡಾ. ಮಹಾಲಿಂಗ ಕೊಲ್ಲೆ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವಿರೇಂದ್ರ ಪಾಟೀಲ್, ಟೌನ್ ಅಧ್ಯಕ್ಷ ಚೆನ್ನವೀರ ಶೆಟ್ಟಿ ಇದ್ದರು.
ಇದನ್ನೂ ಓದಿ – ಡೆಂಗ್ಯು ಶಂಕೆ, ಜ್ವರದಿಂದ ಬಳಲುತ್ತಿದ್ದ ರಿಪ್ಪನ್ಪೇಟೆಯ ಮಹಿಳೆ, ಶಿರಾಳಕೊಪ್ಪದ 9 ತಿಂಗಳ ಮಗು ಸಾವು