ಹಣಗೆರೆಗೆ ತೆರಳುತ್ತಿದ್ದ ಕಾರಿನಲ್ಲಿ ದಿಢೀರ್‌ ಬೆಂಕಿ, ಕೆಲವೇ ಕ್ಷಣದಲ್ಲಿ ಸುಟ್ಟು ಕರಕಲು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

NEWS HIGHLIGHTS

ಶಿಕಾರಿಪುರ: ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಹೊತ್ತಿಗೆ ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಸಾಗರ ತಾಲೂಕಿನ ಆನಂದಪುರ ಸಮೀಪದ ಹೊಸೂರು ಮತ್ತು ಅಂಬಲಿಗೊಳ ಹೆದ್ದಾರಿಯಲ್ಲಿ ಘಟನೆ ಸಂಭವಿಸಿದೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಕಾರು ಶಿಕಾರಿಪುರದಿಂದ ಆಯನೂರು ಸಮೀಪದ ಹಣಗೆರೆ ಕಟ್ಟೆಗೆ ತೆರಳುತ್ತಿತ್ತು. ಈ ವೇಳೆ ಇದ್ದಕ್ಕಿದ್ದಂತೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾರಿನಲ್ಲಿ ಓರ್ವ ಪುರುಷ, ಮೂವರು ಮಹಿಳೆಯರು ಹಾಗೂ ಮಕ್ಕಳು ಪ್ರಯಾಣಿಸುತ್ತಿದ್ದರು. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಎಲ್ಲರೂ ತಕ್ಷಣವೇ ಕಾರಿನಿಂದ ಕೆಳಗಿಳಿದಿದ್ದಾರೆ. ಹೀಗಾಗಿ ದೊಡ್ಡ ಅನಾಹುತ ತಪ್ಪಿದೆ.

car-carrying-a-family-catch-fire

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿಕಾರಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.