ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 1 APRIL 2023
SHIKARIPURA / SHIMOGA : ಕಾರು ತಪಾಸಣೆ (Car Checking) ವೇಳೆ ಸೂಕ್ತ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಲೀಟರ್ ಗಟ್ಟಲೆ ಮದ್ಯ ಮತ್ತು ಬೀಯರ್ ಪತ್ತೆಯಾಗಿದೆ. ಮದ್ಯ ಮತ್ತು ಕಾರನ್ನು ವಶಕ್ಕೆ ಪಡೆದು ಪ್ರಕರಣ ದಾಖಲು ಮಾಡಲಾಗಿದೆ.
ಶಿಕಾರಿಪುರದ ದೇವ ಬಾಳ – ಯಡವಾಲ ರಸ್ತೆಯ ಕೆರೆ ಏರಿ ಪಕ್ಕದ ರಸ್ತೆಯಲ್ಲಿ ವ್ಯಾಗನಾರ್ ಕಾರು ತಪಾಸಣೆ ನಡೆಸಿದಾಗ ಮದ್ಯ ಸಾಗಣೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಕಾರಿನಲ್ಲಿ (Car Checking) ವಿವಿಧ ಬ್ರಾಂಡ್ ನ 70.790 ಲೀಟರ್ ಮದ್ಯ, 56.270 ಲೀಟರ್ ಬಿಯರ್ ಪತ್ತೆಯಾಗಿದೆ. ಅಬಕಾರಿ ಇಲಾಖೆ ಅಧಿಕಾರಿಗಳು ಕಾರನ್ನ ವಶಪಡಿಸಿಕೊಂಡಿದ್ದಾರೆ. ಕಾರಿನಲ್ಲಿದ್ದ ಗಿರೀಶ್ ನಾಯ್ಕ ಮತ್ತು ಅದರ ಮಾಲೀಕನ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ಈವರೆಗೂ ಎಷ್ಟು ಮದ್ಯ ಸೀಜ್ ಆಗಿದೆ?
ವಿಧಾನ ಸಭೆ ಚುನಾವಣೆ ಹಿನ್ನೆಲೆ ಜಿಲ್ಲೆಯಾದ್ಯಂತ ಅಬಕಾರಿ ಇಲಾಖೆ ಅಧಿಕಾರಿಗಳು, ಪೊಲೀಸರು ಕಾರ್ಯಾಚರಣೆ ನಡೆಸಿ ಅಕ್ರಮ ಮದ್ಯವನ್ನು ವಶಪಡಿಸಿಕೊಳ್ಳುತ್ತಿದ್ದಾರೆ. ಈವರೆಗೂ ಜಿಲ್ಲೆಯಲ್ಲಿ 1132.072 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ 3,75,919 ರೂ. ಎಂದು ಅಂದಾಜಿಸಲಾಗಿದೆ.
ಸಾಗರದಲ್ಲಿ ಅತಿ ಹೆಚ್ಚು ಸೀಜ್
ಸಾಗರ ತಾಲೂಕಿನಲ್ಲಿ ಅತಿ ಹೆಚ್ಚು ಮದ್ಯ ವಶಪಡಿಸಿಕೊಳ್ಳಲಾಗಿದೆ. ಚುನಾವಣೆ ಹಿನ್ನೆಲೆ ತಪಾಸಣೆ ಆರಂಭಸಿದಾಗಿನಿಂದ ಸಾಗರ ತಾಲೂಕಿನಲ್ಲಿ 405 ಲೀಟರ್ ಅಕ್ರಮ ಮದ್ಯ ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ 43,408 ರೂ. ಎಂದು ಅಂದಾಜಿಸಲಾಗಿದೆ.
ಇದನ್ನೂ ಓದಿ – ವಿವಿಧ ಚೆಕ್ ಪೊಸ್ಟ್ ಗಳಿಗೆ ರಾತ್ರಿ ಶಿವಮೊಗ್ಗ ಜಿಲ್ಲಾಧಿಕಾರಿ ದಿಢೀರ್ ಭೇಟಿ
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ 168.3 ಲೀಟರ್, ತೀರ್ಥಹಳ್ಳಿಯಲ್ಲಿ 159 ಲೀಟರ್, ಶಿವಮೊಗ್ಗದಲ್ಲಿ 144 ಲೀಟರ್, ಸೊರಬದಲ್ಲಿ 87 ಲೀಟರ್, ಭದ್ರಾವತಿ 83 ಲೀಟರ್, ಶಿಕಾರಿಪುರ 82 ಲೀಟರ್ ಮದ್ಯ ವಶಕ್ಕೆ ಪಡೆಯಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422