ಶಿವಮೊಗ್ಗ ಲೈವ್.ಕಾಂ | 02 ಏಪ್ರಿಲ್ 2019
ಚೆಕ್’ಪೋಸ್ಟ್’ನಲ್ಲಿ ಕರ್ತವ್ಯ ನಿರ್ವಹಿಸುವ ಬದಲು ನಿದ್ರೆ ಮಾಡಿದ ಮೂವರು ಅಧಿಕಾರಿಗಳನ್ನು ಜಿಲ್ಲಾಧಿಕಾರಿ ಸಸ್ಪೆಂಡ್ ಮಾಡಿದ್ದಾರೆ. ವಾಹನಗಳ ತಪಾಸಣೆ ನಡೆಸದೆ ನಿದ್ರೆ ಮಾಡಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಇದನ್ನು ಗಮನಿಸಿದ ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಅವರು, ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಶಿಕಾರಿಪುರ ತಾಲೂಕಿನ ಖವಾಸಪುರ ಚೆಕ್’ಪೋಸ್ಟ್’ಗೆ ನಿಯೋಜನೆಗೊಂಡಿದ್ದ, ಪದವಿ ಪೂರ್ವ ಕಾಲೇಜು ಉಪನ್ಯಾಸಕ ಅಶೋಕ್ ರಾಜ್, ಮುದ್ದನಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮಂಜಪ್ಪ, ಬೇಗೂರು ಸಿ.ಆರ್.ಪಿ ಚನ್ನೇಶ್ ಸಸ್ಪೆಂಡ್ ಆದವರು.
ಈ ಮೂವರು ಸ್ಟ್ಯಾಟಿಕ್ ಸರ್ವೆಲೆನ್ಸ್ (SST) ತಂಡದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ರಾತ್ರಿ ವೇಳೆ ಚೆಕ್’ಪೋಸ್ಟ್’ಗೆ ಬರುವ ವಾಹನಗಳ ತಪಾಸಣೆ ನಡೆಸುವುದು ಇವರ ಜವಾಬ್ದಾರಿಯಾಗಿತ್ತು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]