SHIVAMOGGA LIVE NEWS | 16 MARCH 2023
SHIMOGA : ಮುಖ್ಯಮಂತ್ರಿ (Chief Minister) ಬಸವರಾಜ ಬೊಮ್ಮಾಯಿ ಅವರು ಮಾ.17ರಂದು ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಶಿಕಾರಿಪುರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅವರು ಚಾಲನೆ ನೀಡಲಿದ್ದಾರೆ.
ಬೆಳಗ್ಗೆ 10 ಗಂಟೆಗೆ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಶಿಕಾರಿಪುರಕ್ಕೆ ಆಗಮಿಸಲಿದ್ದಾರೆ. ಹುಚ್ಚರಾಯ ಸ್ವಾಮಿ ದೇವಸ್ಥಾನದ ಪಕ್ಕದಲ್ಲಿರುವ ಹೆಲಿಪ್ಯಾಡ್ ಗೆ ಬಂದಿಳಿಯಲಿದ್ದಾರೆ. ಬಳಿಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಆಸ್ಪತ್ರೆ, ಶಿಕಾರಿಪುರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣವನ್ನು ಸಿಎಂ ಉದ್ಘಾಟಿಸಲಿದ್ದಾರೆ.
ಮಧ್ಯಾಹ್ನ 12 ಗಂಟೆಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ ಉದ್ಘಾಟನೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಉಡುತಡಿ – ಉಡುಗಣಿಯಲ್ಲಿ ಶಿವಶರಣೆ ಅಕ್ಕಮಹಾದೇವಿ ಅವರ ಪುತ್ಥಳಿ ಅನಾವರಣ, ಅಕ್ಷರಧಾಮ ಮಾದರಿಯ ಯಾತ್ರಾ ಸ್ಥಳ, ವಿವಿಧ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ.
ಇದನ್ನೂ ಓದಿ – ಅಡಕೆ ಧಾರಣೆ | 15 ಮಾರ್ಚ್ 2023 | ಶಿವಮೊಗ್ಗ ಸೇರಿ ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ಅಡಕೆ ರೇಟ್?
ಮಧ್ಯಾಹ್ನ 2.15ಕ್ಕೆ ಶಿಕಾರಿಪುರದ ಹುಚ್ಚರಾಯ ಸ್ವಾಮಿ ದೇವಸ್ಥಾನದ ಪಕ್ಕದ ಹೆಲಿಪ್ಯಾಡ್ ಮೂಲಕ ಮುಖ್ಯಮಂತ್ರಿ (Chief Minister) ಬಸವರಾಜ ಬೊಮ್ಮಾಯಿ ಅವರು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿಗೆ ತೆರಳಲಿದ್ದಾರೆ.