ಶಿವಮೊಗ್ಗ ಲೈವ್.ಕಾಂ | SHIKARIPURA NEWS | 12 JUNE 2021
ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಆರ್ಥಿಕ ಪ್ಯಾಕೇಜ್‍ನ ಹಣವನ್ನು ಯಾವುದೆ ಕಾರಣಕ್ಕೂ ಬ್ಯಾಂಕುಗಳು ಸಾಲದ ಹಣಕ್ಕೆ ಜಮೆ ಮಾಡಿಕೊಳ್ಳಬಾರದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದರು.
ಶಿಕಾರಿಪುರದಲ್ಲಿ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ, ರಾಜ್ಯ ಸರ್ಕಾರ ಕರೋನ ಸಂಕಷ್ಟದಲ್ಲಿರುವವರಿಗೆ ಆರ್ಥಿಕ ಪ್ಯಾಕೇಜ್ ಘೋಷಿಸಿದೆ. ಈ ಹಣವನ್ನು ಬ್ಯಾಂಕ್‍ಗಳು ಫಲಾನುಭವಿಗಳ ಸಾಲದ ಮೊತ್ತಕ್ಕೆ ಸರಿದೂಗಿಸಬಾರದು. ಇದನ್ನು ಉಲ್ಲಂಘಿಸುವ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಪ್ಯಾಕೇಜ್‍ನ ಹಣ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆಯಾಗಿರುವುದು ಹಲವು ಬಾರಿ ಅವರಿಗೆ ಗೊತ್ತಾಗುವುದಿಲ್ಲ. ಆದ್ದರಿಂದ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗುತ್ತಿದ್ದಂತೆ ಅವರಿಗೆ ಮಾಹಿತಿ ತಲುಪಿಸುವ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಅವರಿಗೆ ಸಿಎಂ ಸೂಚಿಸಿದರು.
ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]