ಬಾಂಗ್ಲಾ, ಶ್ರೀಲಂಕದಿಂದ ಅಕ್ರಮ ವಲಸಿಗರು, ಕಠಿಣ ಕ್ರಮದ ಭರವಸೆ ನೀಡಿದ ಸಿಎಂ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 13 JUNE 2021

ಶ್ರೀಲಂಕ, ಬಾಂಗ್ಲಾದೇಶದಿಂದ ಅಕ್ರಮವಾಗಿ ರಾಜ್ಯಕ್ಕೆ ಬಂದು ನೆಲೆಸಿರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಅಕ್ರಮ ವಾಸಿಗಳ ಕುರಿತು ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಆಕ್ರಮ ವಲಸಿಗರು ಇದ್ದಾರೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ‌ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದರು.

ಲಾಕ್ ಡೌನ್ ಸಡಿಲಕೆ

ನಾಳೆಯಿಂದ ರಾಜ್ಯದ ಕೆಲ ಭಾಗದಲ್ಲಿ ಲಾಕ್ ಡೌನ್ ನಿರ್ಬಂಧ ಸಡಿಲಿಕೆ ಮಾಡುವ ಸಂಬಂಧ ಬೆಂಗಳೂರಿಗೆ ತೆರಳಿದ ಬಳಿಕ ಅಧಿಕಾರಿಗಳೊಂದಿಗೆ ಚರ್ಚೆ ಮಾಡುತ್ತೇನೆ. ಅಲ್ಲಿ ಅನ್ ಲಾಕ್ ಬಗ್ಗೆ ಅಂತಿಮ‌ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದರು.

ಮುಂಗಾರು ಚೆನ್ನಾಗಿ ಆಗುತ್ತಿದೆ

ರಾಜ್ಯದಲ್ಲಿ ಮುಂಗಾರು ಮಳೆ ಚನ್ನಾಗಿ ಆಗುತ್ತಿದೆ. ಈಗಾಗಲೇ ಭಗವಂತನ ದಯೆಯಿಂದ ಜಲಾಶಯಗಳಿಗೆ ನೀರು ಹರಿದು ಬರುತ್ತಿದೆ. ಮುಂಗಾರು ಮಳೆಯಿಂದ ಕೃಷಿ ಚಟುವಟಿಕೆಗಳು ಚುರುಕುಗೊಂಡಿದೆ. ಕಳೆದ ವರ್ಷದಂತೆ ಈ ವರ್ಷವೂ ಕೂಡ ಮಳೆಯಾಗಲಿದೆ. ಒಳ್ಳೆಯ ಬೆಳೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಿಎಂ ಹೇಳಿಕೆ ವಿಡಿಯೋ ವರದಿ ಇಲ್ಲಿದೆ

184878737 1120867021726540 930985356822368649 n.jpg? nc cat=110&ccb=1 3& nc sid=730e14& nc ohc=32KDutqBAacAX YI1tz& nc ht=scontent.fblr20 1

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment