ಶಿವಮೊಗ್ಗ ಲೈವ್.ಕಾಂ | SHIKARIPURA NEWS | 20 ಅಕ್ಟೋಬರ್ 2020
ರಾಜ್ಯದಲ್ಲಿ ಪ್ರತಿಯೊಬ್ಬರಿಗೂ ನಿವೇಶನ ಒದಗಿಸುವುದು ಹಾಗೂ ಹಂತ ಹಂತವಾಗಿ ಮನೆಗಳನ್ನು ನಿರ್ಮಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.
ಶಿಕಾರಿಪುರದಲ್ಲಿ ಆಯೋಜಿಸಲಾಗಿದ್ದ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಪ್ರತಿಯೆಬ್ಬರಿಗೂ ಮನೆ ಮನೆಗೆ ಹಕ್ಕುಪತ್ರ ತಲುಪಿಸಲಾಗುವುದು. ಮಧ್ಯವರ್ತಿಗಳಿಗೆ ಯಾರೂ ಹಣ ನೀಡಬಾರದು. ಯಾರಾದರೂ ದುಡ್ಡು ಕೇಳಿದರೆ ಜಿಲ್ಲಾದಧಿಕಾರಿಗೆ ದೂರು ನೀಡುವಂತೆ ಅವರು ತಿಳಿಸಿದರು.
ಈ ಬಾರಿ ಉತ್ತಮ ಮಳೆಯಾಗಿದ್ದು, ಕೃಷಿಯನ್ನು ಸುಸ್ತಿರಗೊಳಿಸುವುದು ಸರ್ಕಾರದ ಗುರಿಯಾಗಿದೆ. ತಾಲೂಕಿನಲ್ಲಿ ಮೆಕ್ಕೆ ಜೋಳ ಉತ್ತಮವಾಗಿ ಬಂದಿದ್ದು, ಕಾಳು ಬಿಡಿಸುವ ಯಂತ್ರವನ್ನು ರೈತರಿಗೆ ಸಬ್ಸಿಡಿ ದರದಲ್ಲಿ ಒದಗಿಸಲಾಗುತ್ತಿದೆ. ಇದಕ್ಕಾಗಿ ಶಿಕಾರಿಪುರ ತಾಲೂಕಿಗೆ 1.40ಕೋಟಿ ರೂ ನಿಗದಿಪಡಿಸಲಾಗಿಗೆ ಎಂದರು.
ಲೋಕಸಬಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಮಾತನಾಡಿ, ಶಿಕಾರಿಪುರ ತಾಲೂಕಿನ 14 ಗ್ರಾಮ ಪಂಚಾಯತ್ ವ್ಯಾಪ್ತಿಯ 403 ಫಲಾನುಭವಿಗಳಿಗೆ ಇಂದು ಹಕ್ಕುಪತ್ರ ವಿತರಿಸಲಾಗುತ್ತಿದೆ. ಮುಂದಿನ ಒಂದೆರಡು ವಾರಗಳ ಒಳಗಾಗಿ ಇನ್ನೂ 13 ಗ್ರಾಮ ಪಂಚಾಯತ್ ವ್ಯಾಪ್ತಿಯ 1ಸಾವಿರ ಜನರಿಗೆ ಹಕ್ಕುಪತ್ರ ವಿತರಿಸಲಾಗುವುದು ಎಂದರು.
ಸೌಲಭ್ಯಗಳ ವಿತರಣೆ
ಮುಖ್ಯಮಂತ್ರಿ ಅವರು ಈ ಸಂದರ್ಭದಲ್ಲಿ ನಿವೇಶನ ರಹಿತರಿಗೆ ಹಕ್ಕುಪತ್ರ, ಕೃಷಿಕರಿಗೆ ಕೃಷಿ ಯಂತ್ರೋಪಕರಣ, ವಿದ್ಯಾರ್ಥಿಗಳಿಗೆ ಲಾಪ್ ಟಾಪ್, ಆಕಸ್ಮಕವಾಗಿ ಸಾವಿಗೀಡಾದ ರೈತರಿಗೆ ಪರಿಹಾರ ಧನ ವಿತರಿಸಿದರು.
ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯತ್ ಸಿಇಒ ವೈಶಾಲಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200