ಶಿವಮೊಗ್ಗ ಲೈವ್.ಕಾಂ | SHIKARIPURA | 30 ಸೆಪ್ಟೆಂಬರ್ 2019

ಶಿಕಾರಿಪುರದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇವತ್ತು ಜನತಾ ದರ್ಶನ ನಡೆಸಿದರು. ಭಾರಿ ಸಂಖ್ಯೆಯಲ್ಲಿ ಬಂದಿದ್ದ ಜನರು ಸಿಎಂಗೆ ತಮ್ಮ ಅಹವಾಲು ಸಲ್ಲಿಸಿದರು. ಪ್ರತಿಯೊಬ್ಬರ ಮನವಿಯನ್ನು ಸ್ವೀಕರಿಸಿದ ಮುಖ್ಯಮಂತ್ರಿ, ಕೂಡಲೆ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜನತಾ ದರ್ಶನದಲ್ಲಿ ಸಿಎಂ ಏನೆಲ್ಲ ಹೇಳಿದರು?
ಜಿಲ್ಲೆಯ ಎಲ್ಲಾ ಪ್ರಮುಖ ನೀರಾವರಿ ಯೋಜನೆಗಳನ್ನು ಒಂದು ವರ್ಷದ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ. ಹೊಸೂರು ಉಡುಗಣಿ ತಾಳಗುಂದ ನೀರಾವರಿ ಯೋಜನೆಗೆ ಈಗಾಗಲೇ 607 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಇದೇ ರೀತಿ ಹೊಸಳ್ಳಿ ಏತನೀರಾವರಿ ಕಲ್ಲೂರು ನೀರಾವರಿ ಯೋಜನೆ, ಸೊರಬ ತಾಲೂಕಿನ ಮೂರು ಏತ ನೀರಾವರಿ ಯೋಜನೆಗಳು ಸದ್ಯದಲ್ಲೇ ಆರಂಭವಾಗಲಿದೆ.
ಪ್ರವಾಹ ಪರಿಹಾರ ಕಾಮಗಾರಿಗಳನ್ನು ತ್ವರಿತಗೊಳಿಸಲು ಕ್ರಮಕೈಗೊಳ್ಳಲಾಗಿದೆ. ಅಕ್ಟೋಬರ್ ನಾಲ್ಕರಿಂದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಕಾಮಗಾರಿಗಳ ಪರಿಶೀಲನೆ ನಡೆಸಲಾಗುವುದು.

ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಮುಂದಿನ ಬಜೆಟ್ ನಲ್ಲಿ ಹೆಚ್ಚಿನ ಅನುದಾನ ನೀಡಲಾಗುವುದು. ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿಗೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಶಿಕಾರಿಪುರದಲ್ಲಿ ಶಾಹಿ ಗಾರ್ಮೆಂಟ್ ಘಟಕ ಆರಂಭವಾಗಲಿದ್ದು ಇದರಿಂದ ಈ ಭಾಗದ 2000ಕ್ಕೂ ಹೆಚ್ಚು ಹೆಣ್ಣುಮಕ್ಕಳಿಗೆ ಉದ್ಯೋಗವಕಾಶ ಸೃಷ್ಟಿಯಾಗಲಿದೆ.

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಯನ್ನು ಹತ್ತು ತಿಂಗಳ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ. ಇದಕ್ಕಾಗಿ 45 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಇದರಿಂದ ಹೆಚ್ಚಿನ ಕೈಗಾರಿಕೆಗಳು ಆರಂಭವಾಗಿ, ಉದ್ಯೋಗವಕಾಶ ಸೃಷ್ಟಿಯಾಗುವ ಭರವಸೆ ಹೊಂದಲಾಗಿದೆ. ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚಿನ ಅವಕಾಶವಿದೆ.

ಪ್ರವಾಸೋದ್ಯಮದ ಅಭಿವೃದ್ಧಿಗಾಗಿ ಡಾ.ಸುಧಾಮೂರ್ತಿ ಅವರ ನೇತೃತ್ವದಲ್ಲಿ ಕಾರ್ಯಪಡೆ ರಚಿಸಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದ ಚಿತ್ರಣವೇ ಬದಲಾಗಲಿದೆ. ಜೋಗಜಲಪಾತದ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ.

ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಹಲವು ಪ್ರಮುಖರು ಈ ವೇಳೆ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200