ಶಿವಮೊಗ್ಗ ಲೈವ್.ಕಾಂ | SHIMOGA | 14 ಜನವರಿ 2020
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಿಕಾರಿಪುರಕ್ಕೆ ಭೇಟಿ ನೀಡಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ಸಿಎಂ, ಸಂಜೆ ಶಿಕಾರಿಪುರಕ್ಕೆ ಆಗಮಿಸಿದ್ದಾರೆ. ಇಲ್ಲಿನ ಹೆಲಿಪ್ಯಾಡ್’ನಲ್ಲಿ ಸಿಎಂಗೆ ಪೊಲೀಸರು ಗೌರವ ವಂದನೆ ಸಲ್ಲಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿಕಾರಿಪುರದಲ್ಲಿ ತಮ್ಮ ಮನೆಗೆ ಭೇಟಿ ನೀಡಿದ ಸಿಎಂ ಯಡಿಯೂರಪ್ಪ, ಬಳಿಕ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಹರತಾಳು ಹಾಲಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಜಿಲ್ಲೆಯಲ್ಲಿ ಆರಂಭಿಸಲಾಗಿರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆ. ಇದಕ್ಕೆ ಅಗತ್ಯವಿರುವ ಅನುದಾನವನ್ನು ಒದಗಿಸಲಾಗುವುದು. ರೈತರ ಆದಾಯ ಹೆಚ್ಚಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಸಭೆಯಲ್ಲಿ ಸಿಎಂ ಯಡಿಯೂರಪ್ಪ ತಿಳಿಸಿದರು.
ಹತ್ತೇ ತಿಂಗಳಲ್ಲಿ ಶಿವಮೊಗ್ಗದಲ್ಲಿ ವಿಮಾನ ಹಾರಾಟ
ಕೇಂದ್ರ ಸರ್ಕಾರದ ನೆರವಿನಿಂದ ಜಿಲ್ಲೆಯಲ್ಲಿ ಹಲವಾರು ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗಿದೆ. ನೂತನ ರೈಲ್ವೆ ಮಾರ್ಗ ಯೋಜನೆ ಆರಂಭಿಸಲಾಗಿದೆ. 10 ತಿಂಗಳ ಒಳಗಾಗಿ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಂಡು ವಿಮಾನ ಹಾರಾಟ ಆರಂಭಿಸಲಾಗುವುದು. ವಿಮಾನ ನಿಲ್ದಾಣದಿಂದ ಜಿಲ್ಲೆಯಲ್ಲಿ ಹೊಸ ಕೈಗಾರಿಕೆಗಳ ಆರಂಭಕ್ಕೆ ಪೂರಕ ವಾತಾವರಣ ನಿರೀಕ್ಷೆ ಎಂದು ಸ್ಪಷ್ಟಪಡಿಸಿದರು.
ಬಜೆಟ್ ದಿನಾಂಕ ಫಿಕ್ಸ್
ಮಾರ್ಚ್ ಐದರಂದು ರಾಜ್ಯ ಬಜೆಟ್ ಮಂಡಿಸಲಾಗುತ್ತದೆ ಎಂದು ತಿಳಿಸಿದ ಸಿಎಂ ಯಡಿಯೂರಪ್ಪ, ಅತಿವೃಷ್ಟಿಯಿಂದಾಗಿ ರಾಜ್ಯದಲ್ಲಿ ಸುಮಾರು 7 ಲಕ್ಷ ಹೆಕ್ಟೇರ್ ಬೆಳೆ ನಾಶವಾಗಿದೆ. ಹಣಕಾಸು ಸ್ಥಿತಿಗತಿ ನೋಡಿಕೊಂಡು ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದರು.
ಕಡಿಮೆ ಬಡ್ಡಿ ದರದಲ್ಲಿ ಗುಡಿ ಕೈಗಾರಿಕೆಗಳಿಗೆ ನೆರವು ಯೋಜನೆ. ರಸ್ತೆ ಬದಿ ವ್ಯಾಪಾರ ಮಾಡುವ ಸಣ್ಣ ಪುಟ್ಟ ವ್ಯಾಪಾರಿಗಳಿಗೆ ಕಡಿಮೆ ಬಡ್ಡಿದರದಲ್ಲಿ ನೆರವು ಒದಗಿಸಲು ಬಜೆಟ್ ನಲ್ಲಿ ಅನುದಾನ ಮೀಸಲಿಡಲಾಗುತ್ತದೆ ಎಂದು ಸಿಎಂ ತಿಳಿಸಿದರು.
ಕೈಗಾರಿಕೋದ್ಯಮಿಗಳ ಜೊತೆ ಮಾತುಕತೆ
ದಾವೋಸ್ ನಲ್ಲಿ ನಡೆಯುವ ಸಮಾವೇಶದಲ್ಲಿ ಮೂರು ದಿನಗಳ ಕಾಲ ಭಾಗವಹಿಸಲು ತೆರಳಲಿದ್ದು, ರಾಜ್ಯದಲ್ಲಿ ಬಂಡವಾಳ ತೊಡಗಿಸಲು ಕೈಗಾರಿಕೋದ್ಯಮಿಗಳೊಂದಿಗೆ ಮಾತುಕತೆ ಮಾಡುವುದಾಗಿಯೂ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
Chief Minister B S Yedyurappa Visits Shikaripura. Later CM announced the 2020 State Budget date.