ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 5 MARCH 2024
SHIKARIPURA : ಶಿಕಾರಿಪುರ – ಶಿರಾಳಕೊಪ್ಪ ಮತ್ತು ಶಿವಮೊಗ್ಗ – ಸವಳಂಗ ರಸ್ತೆಯಲ್ಲಿರುವ ಟೋಲ್‌ಗಳ ನಿರ್ಮಾಣಕ್ಕೆ ಅನುಮತಿ ನೀಡಿದ್ದೇ ಬಿಜೆಪಿ ಸರ್ಕಾರ ಎಂದು ಕೆಪಿಸಿಸಿ ಸದಸ್ಯ ಗೋಣಿ ಮಾಲತೇಶ್ ದೂರಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೋಣಿ ಮಾಲ್ತೇಶ್, ತಾವೇ ಮೊದಲು ಟೋಲ್ ನಿರ್ಮಿಸಿ ಈಗ ಚುನಾವಣೆ ಹೊತ್ತಿಗೆ ಕಾಂಗ್ರೆಸ್ ವಿರುದ್ಧ ಆರೋಪ ಮಾಡುತ್ತಿರುವುದು ಸರಿಯಲ್ಲ. ಶಿವಮೊಗ್ಗ – ಶಿಕಾರಿಪುರ – ಹಾನಗಲ್ ರಸ್ತೆಯಲ್ಲಿ ಟೋಲ್ ಸಂಗ್ರಹಿಸಲು ಈ ಹಿಂದೆ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಟೆಂಡರ್ ಕರೆದ ದಾಖಲೆಯನ್ನು ಬಿಡುಗಡೆ ಮಾಡಿದರು.
ಈ ರಸ್ತೆಯಲ್ಲಿ ಟೋಲ್ ಸಂಗ್ರಹಣೆಗೆ 2022ರ ಜು.6ರಂದು ಟೆಂಡರ್ ಕರೆಯಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಮಾವಳಿ ಪ್ರಕಾರ ಒಂದು ಟೋಲ್ ಪಾಯಿಂಟ್‌ನಿಂದ ಮತ್ತೊಂದು ಟೋಲ್ ಪಾಯಿಂಟ್‌ಗೆ 60 ಕಿ.ಮೀ ಇರಬೇಕು. ಆದರೆ ಇವರು 30 ಕಿ.ಮೀ ದೂರದಲ್ಲೇ ಟೋಲ್ ನಿರ್ಮಾಣ ಮಾಡಿರುವುದು ಕಾನೂನು ಬಾಹಿರ. ಶಿವಮೊಗ್ಗ ಹಾಗೂ ಶಿಕಾರಿಪುರ ತಾಲೂಕಿನ ರೈತರು, ಕೂಲಿ ಕಾರ್ಮಿಕರು ಈ ಮಾರ್ಗವಾಗಿ ಅತಿ ಹೆಚ್ಚು ಓಡಾಡುತ್ತಾರೆ. ಅವರಿಗೆಲ್ಲ ಹೆಚ್ಚು ತೊಂದರೆಯಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ 2 ಟೋಲ್‌ಗಳಲ್ಲಿ ಯಾವ್ಯಾವ ವಾಹನಕ್ಕೆ ಎಷ್ಟು ನಿಗದಿಯಾಗಿದೆ ದರ? ಇಲ್ಲಿದೆ ಲಿಸ್ಟ್
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಭಂಡಾರಿ ಮಾಲತೇಶ್, ಪಚ್ಚಿ ಸಂದೀಪ್, ಬನ್ನೂರು ಚರಣ್, ಬೇಗೂರು ಅರುಣ್ ನಾಯಕ್, ಶಿವರಾಜ್, ರವಿಕುಮಾರ್ ಇತರರಿದ್ದರು.
LATEST NEWS
- ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

- ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

- ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

- ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

- ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

About The Editor
ನಿತಿನ್ ಆರ್.ಕೈದೊಟ್ಲು
















