ಶಿಕಾರಿಪುರದಲ್ಲಿ ಕಾಂಗ್ರೆಸ್‌ ಸಮಾವೇಶ, ಸಚಿವರಿಗೆ ಸನ್ಮಾನ, ಯಾರೆಲ್ಲ ಭಾಗಿಯಾಗ್ತಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 12 SEPTEMBER 2023

SHIKARIPURA : ತಾಲ್ಲೂಕು ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ (Convention) ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರಿಗೆ ಅಭಿನಂದನಾ ಕಾರ್ಯಕ್ರಮವನ್ನು ಸೆ.13ರಂದು  ಆಯೋಜಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡ ರಾಘವೇಂದ್ರ ನಾಯ್ಕ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಘವೇಂದ್ರ ನಾಯ್ಕ, ಪಟ್ಟಣದ ನರಸಪ್ಪ ಸ್ಮಾರಕ ಬಯಲು ರಂಗಮಂದಿರದಲ್ಲಿ ಸೆ.13ರಂದು ಮಧ್ಯಾಹ್ನ 3ಕ್ಕೆ ಸಮಾವೇಶ ಆಯೋಜಿಸಲಾಗಿದೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್. ಸುಂದರೇಶ್ ಅಧ್ಯಕ್ಷತೆ ವಹಿಸುವರು. ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ, ಶಾಸಕರಾದ ಗೋಪಾಲಕೃಷ್ಣ ಬೇಳೂರು, ಬಿ.ಕೆ. ಸಂಗಮೇಶ್ವರ, ಮಾಜಿ ಶಾಸಕರಾದ ಕಿಮ್ಮನೆ ರತ್ನಾಕರ, ಆರ್.ಪ್ರಸನ್ನಕುಮಾರ್, ಆಯನೂರು ಮಂಜುನಾಥ್, ವೀಕ್ಷಕ ಚಂದ್ರಪ್ಪ, ಮುಖಂಡರಾದ ಕಲಗೋಡು ರತ್ನಾಕರ, ನಗರದ ಮಹಾದೇವಪ್ಪ, ಗೋಣಿ ಮಾಲತೇಶ್, ಹುಲ್ಮಾರ್ ಮಹೇಶ್, ಕವಲಿ ಗಂಗಾಧರ್ ಪಾಲ್ಗೊಳ್ಳುವರು ಎಂದರು.

ಇದನ್ನೂ ಓದಿ – ವಾಹನಗಳಿಗೆ ದುಬಾರಿ ತೆರಿಗೆ, ಸಾಗರದಲ್ಲಿ ಆಕ್ರೋಶ, ಪ್ರತಿಭಟನಾಕಾರರ ಬೇಡಿಕೆ ಏನು?

ನಾಗರಾಜಗೌಡ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಪಕ್ಷ ಸಂಘಟನೆಗಾಗಿ ಸಮಾವೇಶ ಆಯೋಜಿಸಲಾಗಿದೆ. ತಾಲ್ಲೂಕಿನಲ್ಲಿ ಎಲ್ಲರೂ ಒಟ್ಟಾಗಿ ಪಕ್ಷ ಸಂಘಟಿಸುತ್ತೇವೆ ಎಂದರು.

ರವೀಂದ್ರ, ನವುಲೇಶ್, ನಾಗರಾಜ್ ಗಬ್ಬೂರು, ಮಾರವಳ್ಳಿ ಉಮೇಶ್, ರೇಣುಕಾ ಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದನ್ನೂ ಓದಿ – ಬೆಳ್ಳಂಬೆಳಗ್ಗೆ ಶಿವಮೊಗ್ಗ ಜಿಲ್ಲೆಯಲ್ಲಿ 241 ರೌಡಿಗಳ ಮನೆ ಮೇಲೆ ಪೊಲೀಸರ ದಾಳಿ, ಖುದ್ದು ಫೀಲ್ಡಿಗಿಳಿದ ರಕ್ಷಣಾಧಿಕಾರಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment