ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIKARIPURA, 19 AUGUST 2024 : ಕೇಂದ್ರ ಸರ್ಕಾರವು ರಾಜ್ಯಪಾಲರನ್ನು ಕೈಗೊಂಬೆ ಮಾಡಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ (Prosecution) ಅನುಮತಿ ನೀಡಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಶಿಕಾರಿಪುರದಲ್ಲಿ ಪ್ರತಿಭಟನೆ ನಡೆಸಿದರು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ಸಂದರ್ಭ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವುದರ ಹಿಂದೆ ಬಿಜೆಪಿ ಪಿತೂರಿ ಇದೆ. ರಾಜಭವನವನ್ನು ಬಿಜೆಪಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದರು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ರಾಘವೇಂದ್ರ ವಿರುದ್ಧ ಘೋಷಣೆ ಕೂಗಿದರು.
ಪ್ರತಿಭಟನಾ ಸಭೆಯಲ್ಲು ಆಕ್ರೋಶ
ಯಡಿಯೂರಪ್ಪ ಮನೆ ಮುತ್ತಿಗೆ ಹಾಕುವ ಮುನ್ನ ಶಿಕಾರಿಪುರ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನಾ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಮುಖಂಡರು ಬಿಜೆಪಿ ವಿರುದ್ಧ ಹರಿಹಾಯ್ದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಪಿ.ನಾಗರಾಜ ಗೌಡ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಜನಪರ ಆಡಳಿತ ನೀಡುತ್ತಿದ್ದಾರೆ. ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಖಂಡನೀಯ. ಯಡಿಯೂರಪ್ಪ ಕುಟುಂಬ ಅಕ್ರಮವಾಗಿ ಆಸ್ತಿ ಸಂಪಾದಿಸಿದ್ದಾರೆ. ಅವರ ಕುಟುಂಬದ ಸದಸ್ಯರ ವಿರುದ್ಧ ತನಿಖೆಯಾಗಬೇಕು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಶಿಕಾರಿಪುರಕ್ಕೆ ಬಂದರೆ ಘೆರಾವ್ ಹಾಕಲಾಗುತ್ತದೆ ಎಂದರು.
ಇದನ್ನೂ ಓದಿ ⇒ ಶಿವಮೊಗ್ಗದ ಶಿವಪ್ಪನಾಯಕ ಪ್ರತಿಮೆ ಮುಂದೆ ರಾತ್ರೋರಾತ್ರಿ ಪ್ರತ್ಯಕ್ಷವಾಗುತ್ತೆ ಫಲಕ, ಇದನ್ನು ಹಾಕೋದ್ಯಾರು ಗೊತ್ತಾ?
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಪ್ರಸನ್ನ ಕುಮಾರ್ ಮಾತನಾಡಿ, ಸಿದ್ದರಾಮಯ್ಯ ಅವರು ಕಪ್ಪು ಚುಕ್ಕೆ ಇಲ್ಲದೆ ಪ್ರಮಾಣಿಕವಾಗಿ ಸರ್ಕಾರ ನಡೆಸುತ್ತಿದ್ದಾರೆ. ಆದರೆ ಬಿಜೆಪಿ ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯುವ ಕುತಂತ್ರ ನಡೆಸುತ್ತಿದೆ. ಈವರೆಗೂ ರಾಜ್ಯದಲ್ಲಿ ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರಲು ಬಿಜೆಪಿಗೆ ಸಾಧ್ಯವಾಗಿಲ್ಲ. ಈ ಬಾರಿಯು ಅವರ ಪ್ರಯತ್ನ ವಿಫಲವಾಗಲಿದೆ. ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವುದಿಲ್ಲ. ರಾಜ್ಯಪಾಲರು ಕೇಂದ್ರದ ಕೈಗೊಂಬೆಯಾಗಿರುವುದು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ ಎಂದರು.
ಇದನ್ನೂ ಓದಿ ⇒ ಆಗುಂಬೆಗೆ ಆಸ್ಟ್ರೇಲಿಯಾದ ಭಾರತೀಯ ಹೈಕಮಿಷನರ್ ಭೇಟಿ, 3 ದಿನ ಅಧ್ಯಯನ ಪ್ರವಾಸ
ಮುಖಂಡರಾದ ನಗರದ ಮಹದೇವಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಾರಿವಾಳ ಶಿವರಾಮ್, ಶಿರಾಳಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈರನಗೌಡ, ಮುಖಂಡರಾದ ಹೆಚ್. ಎಸ್. ರವೀಂದ್ರ ಮಾರವಳ್ಳಿ ಉಮೇಶ್, ಉಳ್ಳಿ ದರ್ಶನ್, ಭಂಡಾರಿ ಮಾಲತೇಶ್, ರಾಜಪ್ಪ, ರಾಘವೇಂದ್ರ ನಾಯ್ಕ, ನಗರದ ರವಿಕಿರಣ್, ಶಿವ್ಯಾನಾಯ್ಕ, ಪುನೀತ್ ನಾಯ್ಕ, ಶಿವು ಹುಲ್ಮಾರ್, ಮಂಜು ಹುಣಸೆಕೊಪ್ಪ, ಸುರೇಶ್ ಧಾರವಾಡ ಉಪಸ್ಥಿತರಿದ್ದರು.
ಇದನ್ನೂ ಓದಿ ⇒ ಕೋಳಿ ಸಾಗಿಸುತ್ತಿದ್ದ ವಾಹನ ಪಲ್ಟಿ, 50ಕ್ಕೂ ಹೆಚ್ಚು ಕೋಳಿ ಸಾವು | ಇಲ್ಲಿದೆ 3 ಫಟಾಫಟ್ ಸುದ್ದಿ