ಕಳ್ಳನಿಗೆ ಕರೋನ, ಹಿಡಿದು ತಂದ ಮೂವರು ಪೊಲೀಸರಿಗೆ ಕ್ವಾರಂಟೈನ್, ಪೊಲೀಸ್ ಠಾಣೆ ಸ್ಯಾನಿಟೈಸೇಷನ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 10 ಜುಲೈ 2020

ಕಳ್ಳನೊಬ್ಬನಿಗೆ ಕರೋನ ಸೋಂಕು ತಗುಲಿದ್ದು ಆತನನ್ನು ಹಿಡಿದು ತಂದ ಮೂವರು ಪೊಲೀಸರು ಕ್ವಾರಂಟೈನ್‍ಗೆ ಒಳಗಾಗಿದ್ದಾರೆ. ಪೊಲೀಸ್ ಠಾಣೆಯನ್ನು ಸ್ಯಾನಿಟೈಸ್ ಮಾಡಲಾಗಿದೆ.

ಕಳ್ಳನನ್ನು ಹೊನ್ನಾಳಿಯಿಂದ ಬಂಧಿಸಿ ಶಿಕಾರಿಪುರ ಠಾಣೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲು ಸಿದ್ಧತೆ ನಡೆಸಿದ್ದರು. ಇದಕ್ಕೂ ಮೊದಲು ಆರೋಗ್ಯ ತಪಾಸಣೆಗೆ ಕರೆದೊಯ್ಯಲಾಗಿತ್ತು.

ಈ ವೇಳೆ ಸ್ವ್ಯಾಬ್ ಟೆಸ್ಟ್ ಮಾಡಲಾಗಿತ್ತು. ಕಳ್ಳನಿಗೆ ಕರೋನ ಪಾಸಿಟಿವ್ ಬಂದಿದೆ. ಹಾಗಾಗಿ ಮೂವರು ಪೊಲೀಸರನ್ನು ಕ್ವಾರಂಟೈನ್‍ಗೆ ಕಳುಹಿಸಲಾಗಿದೆ. ಶಿಕಾರಿಪುರ ಟೌನ್ ಪೊಲೀಸ್ ಠಾಣೆಯನ್ನು ಸ್ಯಾನಿಟೈಸ್ ಮಾಡಲಾಗಿದೆ.  

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment