ಶಿವಮೊಗ್ಗ ಲೈವ್
ಶಿಕಾರಿಪುರ: ಬೈಕ್ ಮತ್ತು ಕಾರು ಡಿಕ್ಕಿಯಾಗಿ ಹಸೆಮಣೆ ಏರಬೇಕಿದ್ದ ಜೋಡಿ (Couple) ಸಾವನ್ನಪ್ಪಿದ್ದಾರೆ. ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಕ್ರಾಸ್ನಲ್ಲಿ ಘಟನೆ ಸಂಭವಿಸಿದೆ. (ಈ ಸುದ್ದಿಯನ್ನು ಇನ್ನು 33 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಮೃತರನ್ನು ತಾಲೂಕಿನ ಮಟ್ಟಿಕೋಟೆಯ ರೇಖಾ (20), ತೊಗರ್ಸಿ ಸಮೀಪದ ಗಂಗೊಳ್ಳಿಯ ಬಸವನಗೌಡ ದ್ಯಾಮನಗೌಡ್ರ (25) ಎಂದು ಗುರುತಿಸಲಾಗಿದೆ. ಪಟ್ಟಣದಲ್ಲಿರುವ ಗಾರ್ಮೆಂಟ್ಸ್ ಕೆಲಸಕ್ಕೆ ತೆರಳುವವರನ್ನು ಕರೆ ತರುತ್ತಿದ್ದ ಕಾರು ಡಿಕ್ಕಿ ಹೊಡೆದಾಗ ಬೈಕ್ ರಸ್ತೆ ಪಕ್ಕದ ಕಂದಕಕ್ಕೆ ಬಿದ್ದಿದೆ.
ಕಳೆದ ತಿಂಗಳು ರೇಖಾ, ಬಸವನಗೌಡ ನಿಶ್ಚಿತಾರ್ಥ ನಡೆದಿತ್ತು. ಮಳೆಯ ಕಾರಣಕ್ಕೆ ಮದುವೆ ಮುಂದಕ್ಕೆ ಹಾಕಿದ್ದು, ಡಿಸೆಂಬರ್ನಲ್ಲಿ ಮದುವೆಗೆ ದಿನಾಂಕ ನಿಗದಿ ಮಾಡಲಾಗಿತ್ತು.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಇದನ್ನೂ ಓದಿ » ರಿಯಾಯತಿ ದರದಲ್ಲಿ ದಂಡ ಪಾವತಿ, ಇನ್ನೊಂದೇ ದಿನ ಬಾಕಿ, ಈವರೆಗೂ ಶಿವಮೊಗ್ಗ ಜಿಲ್ಲೆಯಲ್ಲಿ ಎಷ್ಟು ಫೈನ್ ಕಟ್ಟಲಾಗಿದೆ?
Couple succumbed in a mishap at shikaripura
