ಇವತ್ತು ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ, ಯಾವ ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ ಡಿಸಿ? ಏನೇನು ಕಾರ್ಯಕ್ರಮ ನಡೆಯುತ್ತೆ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

147011183 1327318294296254 3834645892722110036 o.jpg? nc cat=105&ccb=3& nc sid=8bfeb9& nc ohc=ZNUWIDTXgPcAX9FSFBC& nc ht=scontent.fixe1 2

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 FEBRUARY 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

‘ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ’ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ  ಅವರ ತವರು ಕ್ಷೇತ್ರ ಶಿಕಾರಿಪುರದ ತಡಸನಹಳ್ಳಿ ಸಜ್ಜಾಗಿದೆ. ಇವತ್ತು ಬೆಳಗ್ಗೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಡಸನಹಳ್ಳಿ ಗ್ರಾಮಕ್ಕೆ ತೆರಳಲಿದ್ದು, ಸಾಲು ಸಾಲು ಸಭೆಗಳನ್ನು ನಡೆಸಲಿದ್ದಾರೆ. ರಾತ್ರಿ ಅಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ.

ಹೇಗಿರತ್ತೆ ಡಿಸಿ ನಡೆ ಕಾರ್ಯಕ್ರಮ?

ಜಿಲ್ಲಾಧಿಕಾರಿ ಅವರೊಂದಿಗೆ ವಿವಿಧ ಇಲಾಖೆ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು ತಡಸನಹಳ್ಳಿಗೆ ಭೇಟಿ ನೀಡಲಿದ್ದಾರೆ. ಇಡೀ ದಿನ ಅಲ್ಲಿಯೇ ವಿವಿಧ ಕಾರ್ಯಕ್ರಮಗಳಲ್ಲಿ ಜಿಲ್ಲಾಧಿಕಾರಿ ಅವರು ಭಾಗವಹಿಸಲಿದ್ದಾರೆ. ಗ್ರಾಮದ ವಿದ್ಯಾರ್ಥಿಗಳು, ಗ್ರಾಮಸ್ಥರ ಜೊತೆಗೆ ಜಿಲ್ಲಾಧಿಕಾರಿ ಅವರು ಸಭೆ ನಡೆಸಲಿದ್ದಾರೆ.

151910146 1331897470505003 6077025003304925851 o.jpg? nc cat=104&ccb=3& nc sid=730e14& nc ohc=AQz729qsx3cAX NFztf& nc ht=scontent.fblr1 4

ಏನೇನು ಕಾರ್ಯಕ್ರಮಗಳಿವೆ?

ತಡಸನಹಳ್ಳಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಗ್ರಾಮಕ್ಕೆ ಭೇಟಿ ನೀಡುತ್ತಿದ್ದಂತೆ ಈ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಅವರು ಚಾಲನೆ ನೀಡಲಿದ್ದಾರೆ. ಬಳಿಕ ಗಿಡ ನೆಡುವ ಕಾರ್ಯಕ್ರಮ, ವಿದ್ಯಾರ್ಥಿಗಳ ಜೊತೆ ಸಂವಾದ, ಶಿಕ್ಷಕರ ಜೊತೆ ಸಭೆ ನಡೆಸಿ ಶೈಕ್ಷಣಿಕ ಪ್ರಗತಿಯ ಕುರಿತು ಅವಲೋಕನ ನಡೆಸಲಿದ್ದಾರೆ.

ಅಂಗನವಾಡಿ ಕೇಂದ್ರಕ್ಕೆ ಭೇಟಿ, ಗ್ರಾಮಸ್ಥರಿಂದ ಅಹವಾಲು ಸ್ವೀಕಾರ, ಗ್ರಾಮ ಪಂಚಾಯಿತಿ ಪ್ರತಿನಿಧಿಗಳ ಜೊತೆ ಸಮಾಲೋಚನೆ, ಗ್ರಾಮದ ವಿವಿಧೆಡೆ ಸಂಚಾರ, ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

ಸಂಜೆ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಸಭೆ ನಡೆಸಲಿದ್ದಾರೆ. ರಾತ್ರಿ ಅಲ್ಲಿಯೇ ವಾಸ್ತವ್ಯ ಮಾಡಲಿರುವ ಜಿಲ್ಲಾಧಿಕಾರಿ ಅವರು, ಬೆಳಗ್ಗೆ ಗ್ರಾಮದಲ್ಲಿ ಸಂಚರಿಸಲಿದ್ದಾರೆ. ಬಳಿಕ ಕೇಂದ್ರ ಸ್ಥಾನಕ್ಕೆ ಮರಳಲಿದ್ದಾರೆ.

ಸಂಸದ ರಾಘವೇಂದ್ರ ಭೇಟಿ

ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮಕ್ಕೆ ಸಂಸದ ಬಿ.ವೈ.ರಾಘವೇಂದ್ರ ಅವರು ಭೇಟಿ ನೀಡಲಿದ್ದಾರೆ. ತಡಸನಹಳ್ಳಿ ಗ್ರಾಮದಲ್ಲಿ ಸಂಜೆ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಸಂಸದರು ಭಾಗವಹಿಸಲಿದ್ದಾರೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment