ಶಿಕಾರಿಪುರ: ನಕಲಿ ಪಿ.ಹೆಚ್.ಡಿ ಪ್ರಮಾಣಪತ್ರ ನೀಡಿ ಶಿಕಾರಿಪುರದ ಸರ್ಕಾರಿ ಪದವಿ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅತಿಥಿ ಉಪನ್ಯಾಸಕ (guest lecturer) ಮಾದೇಶ ಪ್ರಭು ಅವರನ್ನು ಶುಕ್ರವಾರ ಸೇವೆಯಿಂದ ಬಿಡುಗಡೆ ಮಾಡಲಾಗಿದೆ.
ಮಾದೇಶ ಪ್ರಭು ಅವರು ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕರಾಗಿದ್ದರು. 2015ರಲ್ಲಿ ಉತ್ತರ ಪ್ರದೇಶದ ಝಾನ್ಸಿಯ ಬುಂದೇಲ್ಖಂಡ ವಿಶ್ವವಿದ್ಯಾಲಯದಲ್ಲಿ ಪಿ.ಹೆಚ್.ಡಿ ಪೂರ್ಣಗೊಳಿಸಿರುವುದಾಗಿ ಪ್ರಮಾಣಪತ್ರ ಸಲ್ಲಿಸಿದ್ದರು. ಪದವಿ ಪ್ರಮಾಣಪತ್ರದ ನೈಜತೆ ಪರಿಶೀಲನೆಗೆ ಸರ್ಕಾರ ಸುತ್ತೋಲೆ ಹೊರಡಿಸಿದ ಕಾರಣಕ್ಕೆ ಕಾಲೇಜು ಮಟ್ಟದ ಪರಿಶೀಲನಾ ಸಮಿತಿಯು ವಿಶ್ವವಿದ್ಯಾಲಯದ ಜತೆ ಸಂವಹನ ನಡೆಸಿತ್ತು. ಅಲ್ಲಿನ ವಿ.ವಿಯಿಂದ ಮಾದೇಶ ಪ್ರಭು ಅವರು ಪಿ.ಹೆಚ್.ಡಿ ಪಡೆದಿಲ್ಲ ಎನ್ನುವುದು ದೃಢಪಟ್ಟಿತು. ಆದ್ದರಿಂದ ಸಭೆ ನಡೆಸಿದ ಸಮಿತಿ, ಅವರನ್ನು ಸೇವೆಯಿಂದ ಬಿಡುಗಡೆ ಮಾಡಿದೆ.
“ವಾಣಿಜ್ಯ ವಿಭಾಗದ ಅತಿಥಿ ಉಪನ್ಯಾಸಕರಾಗಿದ್ದ ಮಾದೇಶಪ್ರಭು ಸಲ್ಲಿಸಿರುವ ಪಿಎಚ್.ಡಿ ಪದವಿ ಪ್ರಮಾಣ ಪತ್ರ ನಕಲಿಯಾಗಿದೆ ಎನ್ನುವ ಕಾರಣಕ್ಕೆ ಅವರನ್ನು ಸೇವೆಯಿಂದ ಬಿಡುಗಡೆ ಮಾಡಲಾಗಿದೆ” ಎಂದು ಸರ್ಕಾರಿ ಪದವಿ ಕಾಲೇಜು ಪ್ರಾಂಶುಪಾಲ ಚನ್ನೇಶ್ ತಿಳಿಸಿದ್ದಾರೆ.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ