ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 5 ಫೆಬ್ರವರಿ 2020
ಬಸ್ ಚಾಲನೆ ಮಾಡುತ್ತಿದ್ದಾಗಲೇ ಖಾಸಗಿ ಬಸ್ ಚಾಲಕರೊಬ್ಬರಿಗೆ ಹೃದಯಾಘಾತವಾಗಿದೆ. ಆದರೆ ಈ ವೇಳೆಯಲ್ಲೂ ಚಾಲಕ ಸಮಯ ಪ್ರಜ್ಞೆ ಮೆರೆದಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕುಮಾರ್ (32) ಹೃದಯಾಘಾತದಿಂದ ಮೃತರಾದ ಚಾಲಕ. ಖಾಸಗಿ ಬಸ್ ಶಿಕಾರಿಪುರದಿಂದ ಹೊನ್ನಾಳಿಗೆ ತೆರಳುತ್ತಿತ್ತು. ಕೆಂಗಟ್ಟೆ ಗ್ರಾಮದ ಬಳಿ ಬರುತ್ತಿದ್ದಂತೆ ಚಾಲಕ ಕುಮಾರ್ ಅವರಿಗೆ ಹೃದಯಾಘಾತವಾಗಿದೆ. ಆ ಸಮಯದಲ್ಲೂ ಬಸಿನ ವೇಗ ತಗ್ಗಿಸಿದ ಕುಮಾರ್, ಎಡ ಭಾಗದ ಮರಕ್ಕೆ ಗುದ್ದಿಸಿ, ನಿಲ್ಲಿಸಿದ್ದಾರೆ.
ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಆದರೆ ಚಾಲಕ ಕುಮಾರ್ ಹೃದಯಾಘಾತದಿಂದ ಮೃತರಾಗಿದ್ದಾರೆ. ಹೃದಯಾಘಾತದ ಸಮಯದಲ್ಲೂ ಚಾಲಕ ಸಮಯ ಪ್ರಜ್ಞೆ ಮೆರೆದಿದ್ದಾರೆ. ಚಾಲಕ ಕುಮಾರ್ ಅವರಿಗೆ ಬಸ್ ಚಾಲಕರು, ಮಾಲೀಕರ ಸಂಘ ಸಂತಾಪ ಸೂಚಿಸಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422