ಊರಿಗೆ ನೀರು ಬಿಡಲು ಮೋಟರ್ ಹಾಕಲು ಹೋದ ನೀರುಗಂಟಿಗೆ ಶಾಕ್, ಸ್ಥಳದಲ್ಲೇ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIKARIPURA | 7 ಅಕ್ಟೋಬರ್ 2019

ಗ್ರಾಮಕ್ಕೆ ನೀರು ಬಿಡಲು ಮೋಟರ್ ಸ್ವಿಚ್ ಹಾಕಲು ಹೋದಾಗ ನೀರುಗಂಟಿಗೆ ವಿದ್ಯುತ್ ಶಾಕ್ ತಗುಲಿ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಶಿಕಾರಿಪುರದ ಮುಚಡಿ ಗ್ರಾಮದಲ್ಲಿ ಘಟನೆ ನಡೆದಿದೆ.

ನೀರುಗಂಟಿ ಮಲ್ಲೇಶಪ್ಪ (62) ಮೃತ ದುರ್ದೈವಿ. ಮುಚಡಿ ಗ್ರಾಮಕ್ಕೆ ನೀರು ಸರಬರಾಜು ಮಾಡುವ ಬೋರ್’ವೆಲ್ ಮೋಟರ್ ಸ್ವಿಚ್ ಹಾಕಲು ಹೋದಾಗ ವಿದ್ಯುತ್ ಶಾಕ್ ಹೊಡೆದಿದೆ.

ಚಪ್ಪಲಿ ಹಾಕದೆ ಕೆಸರಿನಲ್ಲಿ ನಿಂತು ಸ್ವಿಚ್ ಹಾಕಿದಾಗ ಘಟನೆ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಶಿರಾಳಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment