ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗ: ಅಬಕಾರಿ ಇಲಾಖೆಯ ಶಿಕಾರಿಪುರ ವಲಯದ ಉಪ ಆಯುಕ್ತರ ಕಚೇರಿ ಚಾಲಕ ಸೋಮೇಶ್ವರ್.ಕೆ.ಎ ಅವರನ್ನು ಅಮಾನತು (Suspend) ಮಾಡಿ ಉಪ ಆಯುಕ್ತರು ಆದೇಶಿಸಿದ್ದಾರೆ. 2024ರ ಆ.26ರಿಂದ ಅನಧಿಕೃತವಾಗಿ ಗೈರಾಗಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸೋಮೇಶ್ವರ್ ಕೆ.ಎ ಅವರಿಗೆ ಗೈರು ಹಾಜರಾದ ಕುರಿತು ಕಾರಣ ಕೇಳಿ ಕಚೇರಿಯಿಂದ ಅಂತಿಮ ನೋಟಿಸ್ ನೀಡಲಾಗಿತ್ತು. ಶಿವಮೊಗ್ಗದಲ್ಲಿ ಮನೆ ಬಳಿ ವಿಚಾರಣೆ ನಡೆಸಿದಾಗ ಅವರು ಅಲ್ಲಿ ವಾಸವಾಗಿಲ್ಲ ಎಂದು ತಿಳಿದು ಬಂದಿತ್ತು. ಸ್ಥಳ ಮಹಜರ್ ಮಾಡಿ ಶಿಕಾರಿಪುರ ವಲಯದ ಅಬಕಾರಿ ನಿರೀಕ್ಷಕರಿಗೆ ವರದಿ ಸಲ್ಲಿಸಲಾಗಿದೆ. ವರದಿ ಆಧಾರದಿಂದ ಸೋಮೇಶ್ವರ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಈ ಪ್ರಕಟಣೆ ಹೊರಡಿಸಿದ 15 ದಿನದೊಳಗೆ ಕಚೇರಿ ಹಾಜರಾಗಿ ಸೂಕ್ತ ವಿವರಣೆ ಸಲ್ಲಿಸಬೇಕು. ತಪ್ಪಿದಲ್ಲಿ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಾವಳಿಗಳು-1957ರ ನಿಯಮದ ಅಡಿ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಅಬಕಾರಿ ಇಲಾಖೆ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ » ಒಂದೇ ಒಂದು ಮೆಸೇಜ್ ಮಾಡಿ ₹3.96 ಲಕ್ಷ ಕಳೆದುಕೊಂಡ ಭದ್ರಾವತಿ ವ್ಯಕ್ತಿ
Suspend






