ಶಿವಮೊಗ್ಗ ಲೈವ್.ಕಾಂ | SHIKARIPURA NEWS | 16 JUNE 2021
ಕಳ್ಳಭಟ್ಟಿ ತಯಾರಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಮಳವಳ್ಳಿ ತಾಂಡಾದ ಮನೆಯೊಂದರ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿಕಾರಿಪುರ ತಾಲೂಕು ಮಳವಳ್ಳಿ ತಾಂಡಾದ ಕುಮಾರ ನಾಯ್ಕ ಎಂಬುವವರ ಮನೆ ಮೇಲೆ ದಾಳಿ ಮಾಡಲಾಗಿದೆ. ಮೂರು ಲೀಟರ್ ಕಳ್ಳಭಟ್ಟಿ ಮತ್ತು ಅದನ್ನು ತಯಾರಿಸಲು ಬಳಸಿದ್ದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಅಬಕಾರಿ ಇಲಾಖೆ ಉಪ ಆಯುಕ್ತ ಕ್ಯಾ. ಅಜಿತ್ ಕುಮಾರ್ ಮಾರ್ಗದರ್ಶನದಲ್ಲಿ ಸಾಗರ ಉಪ ವಿಭಾಗದ ಉಪ ಅಧೀಕ್ಷಕ ಕೆ.ಹೆಚ್.ರಮೇಶ್ ಮಾರ್ಗದರ್ಶನದಲ್ಲಿ ನಿರೀಕ್ಷಕರಾದ ಹಾಲನಯ್ಕ್ ಮತ್ತು ಸಿಬ್ಬಂದಿಗಳು ಹಾಗೂ ಶಿಕಾರಿಪುರ ವಲಯ ಕಚೇರಿಯ ಅಬಕಾರಿ ಕಾನ್‍ಸ್ಟೇಬಲ್‍ಗಳಾದ ಮಂಜುನಾಥ್, ಕನಕಪ್ಪ, ಹನುಮಂತಪ್ಪ ಬಸವರಾಜ್ ಸಿದ್ದಲಿಂಗಪ್ಪ ಅವರು ದಾಳಿಯಲ್ಲಿ ಪಾಲ್ಗೊಂಡಿದ್ದರು.
ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]