ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIKARIPURA NEWS | 20 ಅಕ್ಟೋಬರ್ 2020
ಎಫ್ಡಿಎ, ಎಸ್ಡಿಎ ನೇಮಕಾತಿ ಪ್ರಕ್ರಿಯೆಗೆ ಸರ್ಕಾರ ತಡೆಯನ್ನು ತೆರವು ಮಾಡಬೇಕು ಎಂದು ಒತ್ತಾಯಿಸಿ ಅಭ್ಯರ್ಥಿಗಳು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಶಿಕಾರಿಪುರದಲ್ಲಿ ಯಡಿಯೂರಪ್ಪ ಅವರನ್ನು ಭೇಟಿಯಾದ ಅಭ್ಯರ್ಥಿಗಳು, 2017ರಲ್ಲಿ 1812 ಎಫ್ಡಿಎ ಮತ್ತು ಎಸ್ಡಿಎ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಪರೀಕ್ಷೆ ನಡೆಸಿ, 2020ರ ಜುಲೈ ತಿಂಗಳಲ್ಲಿ ಅಂತಿಮ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಆದರೆ ಕೋವಿಡ್ ಹಿನ್ನೆಲೆ, ಆರ್ಥಿಕ ಸಂಕಷ್ಟವಿದ್ದು, ಕೆಲವು ಇಲಾಖೆಗಳಿಗೆ ನೇಮಕಾತಿ ಪತ್ರ ನೀಡದಂತೆ ತಡೆ ಹಿಡಿಯಲಾಗಿದೆ. ಇದರಿಂದ ಅಭ್ಯರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪರಿಶೀಲನೆ ನಡೆಸಿ ತಡೆ ತೆರವುಗೊಳಿಸುವ ಭರವಸೆ ನೀಡಿದರು. ಇದೆ ವೇಳೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೂ ಮನವಿ ಸಲ್ಲಿಸಲಾಯಿತು.
ಅಭ್ಯರ್ಥಿಗಳಾದ ಸುದೀಪ್.ಕೆ.ಸಿ, ಮಾಜಿ ಸೈನಿಕ ಕಿಶೋರ್, ಭಾಗ್ಯಾ ಕುಮಾರಿ, ಉಮಾಬಾಯಿ, ವಿನಯ್, ವೆಂಕಟೇಶ್ ಇದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422