ಶಿಕಾರಿಪುರದ ಶಿವಮೊಗ್ಗ ರಸ್ತೆಯಿಂದ ಬೈಕ್‌ ಜಾಥಾ, ನ.30ರಂದು ಸಂತೆ ಮೈದಾನದಲ್ಲಿ ಸಮಾರಂಭ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 27 NOVEMBER 2023

SHIKARIPURA : ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿ.ವೈ.ವಿಜಯೇಂದ್ರ (B.Y.Vijayendra) ಮತ್ತು ವಿಧಾನ ಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅವರಿಗೆ ನ.30ರಂದು ಶಿಕಾರಿಪುರದ ಹಳೆ ಸಂತೆ ಮೈದಾನದಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ ತಿಳಿಸಿದರು.

ಶಿಕಾರಿಪುರ ಪಟ್ಟಣದ ಕುಮದ್ವತಿ ಆಡಿಟೋರಿಯಂನಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಕೆ.ಎಸ್.ಗುರುಮೂರ್ತಿ, ನಮ್ಮ ಶಾಸಕರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆ ಆಗಿರುವುದು ಸಾಮಾನ್ಯ ಕಾರ್ಯಕರ್ತರಿಂದ ಎಲ್ಲರಿಗು ಹೆಮ್ಮೆಯ ಸಂಗತಿ ಎಂದರು.

ಇದನ್ನೂ ಓದಿ – 2024ರ ಸರ್ಕಾರಿ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ, ಎಷ್ಟು ರಜೆಗಳಿವೆ?

ನ.30ರಂದು ಶಿವಮೊಗ್ಗ ರಸ್ತೆಯ ಎಪಿಎಂಸಿ ಮುಂಭಾಗದಿಂದ ಬೈಕ್‌ ಜಾಥಾ ನಡೆಯಲಿದೆ. ಶ್ರೀ ಹುಚ್ಚರಾಯಸ್ವಾಮಿ ದೇವಸ್ಥಾನ ತಲುಪಿ ಕ್ಷೇತ್ರಾಧಿಪತಿ ಶ್ರೀ ಹುಚ್ಚರಾಯಸ್ವಾಮಿ ದರ್ಶನ ಮಾಡಲಿದ್ದಾರೆ. ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ತೆರಳಿ ನಂತರ ಹಳೆ ಸಂತೆ ಮೈದಾನ ತಲುಪಲಿದೆ. ಶ್ರೀ ಮಾರಿಕಾಂಬಾ ದೇಗುಲದಲ್ಲಿ ಬೆಳಗ್ಗೆ 11ಕ್ಕೆ ಅಭಿನಂದನಾ ಸಮಾರಂಭ ನಡೆಯಲಿದೆ.ಕೆ.ಎಸ್‌.ಗುರುಮೂರ್ತಿ, ಬಿಜೆಪಿ ಮುಖಂಡ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವರಾದ ಕೆ.ಎಸ್.ಈಶ್ವರಪ್ಪ, ಆರಗ ಜ್ಞಾನೇಂದ್ರ, ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕ ಚನ್ನಬಸಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್‌ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment