ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
SHIVAMOGGA LIVE NEWS | 27 NOVEMBER 2023
SHIKARIPURA : ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿ.ವೈ.ವಿಜಯೇಂದ್ರ (B.Y.Vijayendra) ಮತ್ತು ವಿಧಾನ ಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರಿಗೆ ನ.30ರಂದು ಶಿಕಾರಿಪುರದ ಹಳೆ ಸಂತೆ ಮೈದಾನದಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ ತಿಳಿಸಿದರು.
ಶಿಕಾರಿಪುರ ಪಟ್ಟಣದ ಕುಮದ್ವತಿ ಆಡಿಟೋರಿಯಂನಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಕೆ.ಎಸ್.ಗುರುಮೂರ್ತಿ, ನಮ್ಮ ಶಾಸಕರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆ ಆಗಿರುವುದು ಸಾಮಾನ್ಯ ಕಾರ್ಯಕರ್ತರಿಂದ ಎಲ್ಲರಿಗು ಹೆಮ್ಮೆಯ ಸಂಗತಿ ಎಂದರು.
ಇದನ್ನೂ ಓದಿ – 2024ರ ಸರ್ಕಾರಿ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ, ಎಷ್ಟು ರಜೆಗಳಿವೆ?
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವರಾದ ಕೆ.ಎಸ್.ಈಶ್ವರಪ್ಪ, ಆರಗ ಜ್ಞಾನೇಂದ್ರ, ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕ ಚನ್ನಬಸಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.






