SHIVAMOGGA LIVE NEWS | 1 DECEMBER 2023
SHIKARIPURA : ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿ ಕ್ಷೇತ್ರಕ್ಕೆ ಆಗಮಿಸಿದ ಬಿ.ವೈ.ವಿಜಯೇಂದ್ರ (BY Vijayendra) ಅವರಿಗೆ ಬಿಜೆಪಿ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು. ಇದಕ್ಕೂ ಮೊದಲು ನಗರದ ಪ್ರಮುಖ ಬೀದಿಗಳಲ್ಲಿ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಲಾಯಿತು ದೊಡ್ಡ ಸಂಖ್ಯೆಯ ಕಾರ್ಯಕರ್ತರು ಬಿಜೆಪಿ ಧ್ವಜ ಹಿಡಿದು ಬೈಕ್ ಜಾಥಾ ಮಾಡಿದರು.
ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನಿಗೆ ಸನ್ಮಾನ
ಶಿಕಾರಿಪುರ ಪಟ್ಟಣದ ಹಳೆ ಸಂತೆ ಮೈದಾನದಲ್ಲಿ ತಾಲೂಕು ಬಿಜೆಪಿ ಘಟಕದ ವತಿಯಿಂದ ಅಭಿನಂದನೆ ಸಮಾರಂಭ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಯಾರೆಲ್ಲ ಏನೇನು ಹೇಳಿದರು. ಇಲ್ಲಿದೆ ಪ್ರಮುಖಾಂಶ.
ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ : ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಸರ್ಕಾರದ ಟೈರ್ ಪಂಕ್ಚರ್ ಆಗಲಿದೆ. ರಾಜ್ಯದ ಜನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು 28 ಕ್ಷೇತ್ರಗಳಲ್ಲಿ ಗೆಲ್ಲಿಸುವ ಮೂಲಕ ಬಡವರ ಹಾಗೂ ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಉತ್ತರ ಕೊಡಬೇಕು. ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ರೈತರ ಕಷ್ಟಕ್ಕೆ ಈ ಸರ್ಕಾರ ಸ್ಪಂದಿಸಿಲ್ಲ. ಬೆಳಗಾವಿ ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ರೈತ ವಿರೋಧಿ ಹಾಗೂ ಬಡವರ ವಿರೋಧಿ ಕಾಂಗ್ರೆಸ್ ಸರ್ಕಾರದ ಕಿವಿ ಹಿಂಡುತ್ತೇವೆ.
ಆರ್.ಅಶೋಕ್, ವಿರೋಧ ಪಕ್ಷದ ನಾಯಕ : ರಾಜ್ಯದಲ್ಲಿ ಬರಗಾಲ ಇದ್ದರು ರೈತರಿಗೆ ಪರಿಹಾರ ನೀಡಿಲ್ಲ. ಜೋಡೆತ್ತು ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಧ್ಯೆ ಹೊಂದಾಣಿಕೆ ಇಲ್ಲ. ಅಧಿಕಾರಕ್ಕಾಗಿ ಕಿತ್ತಾಟ ನಡೆಯುತ್ತಿದೆ. ಕಮಿಷನ್ ದಂಧೆ ಹಾಗೂ ವರ್ಗಾವಣೆಯಲ್ಲಿ ಸರ್ಕಾರ ಮುಳುಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ ಮಾಡಿದ ಈ ಸರ್ಕಾರವನ್ನು ಜನರು ಕಿತ್ತೊಗೆಯಬೇಕು.
ಬಿ.ವೈ.ರಾಘವೇಂದ್ರ, ಸಂಸದ : ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ತಾಲ್ಲೂಕಿನಲ್ಲಿ ಅನುಷ್ಠಾನವಾದ ಏತ ನೀರಾವರಿ ಯೋಜನೆಗಳನ್ನು ‘ನಾವು ಮಾಡಿದ್ದೇವೆ’ ಎಂದು ಕೆಲವು ಕಾಂಗ್ರೆಸ್ ಮುಖಂಡರು ಹೇಳಿಕೊಳ್ಳುತ್ತಿದ್ದಾರೆ. ಸೊರಬ ತಾಲ್ಲೂಕಿನಲ್ಲಿ ಏತ ನೀರಾವರಿ ಯೋಜನೆ ಅನುಷ್ಠಾನವಾಗಲು ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಬರಬೇಕಾಯಿತು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶಾಸಕ ಚನ್ನಬಸಪ್ಪ, ಮಾಜಿ ಶಾಸಕರಾದ ಹರತಾಳು ಹಾಲಪ್ಪ, ಎಂ.ಪಿ.ರೇಣುಕಾಚಾರ್ಯ, ಬಿ.ಸಿ.ಪಾಟೀಲ್, ಅರುಣ್ ಪೂಜಾರಿ, ಮುಖಂಡರಾದ ಕೆ.ಎಸ್.ಗುರುಮೂರ್ತಿ, ಡಿ.ಟಿ.ಮೇಘರಾಜ್, ರಾಜು ತಲ್ಲೂರು, ಕೊಳಗಿ ರೇವಣಪ್ಪ, ಎಂ.ಬಿ.ಚನ್ನವೀರಪ್ಪ, ಎಚ್.ಟಿ.ಬಳಿಗಾರ್, ಭದ್ರಾಪುರ ಹಾಲಪ್ಪ, ಟಿ.ಎಸ್.ಮೋಹನ್, ವೀರೇಂದ್ರ ಪಾಟೀಲ್ ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200