ಶಿಕಾರಿಪುರದಲ್ಲಿ ಕಾಡು ಹಂದಿ ಬೇಟೆ: ಮನೆ ಮೇಲೆ ದಾಳಿ, ಒಬ್ಬ ಅರೆಸ್ಟ್‌

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

NEWS HIGHLIGHTS

ಶಿಕಾರಿಪುರ: ತಾಲ್ಲೂಕಿನ ಗಾಮ ಗ್ರಾಮದಲ್ಲಿ ಕಾಡು ಹಂದಿಯನ್ನು ಬೇಟೆಯಾಡಿ, ಮನೆಯಲ್ಲಿ ಮಾಂಸ ಮಾಡಿ ಮಾರಾಟ ಮಾಡಲು ಸಿದ್ಧತೆ ನಡೆಸುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಗಾಮ ಗ್ರಾಮದ ನಿವಾಸಿ ಕುಮಾರ ಬಂಧಿತ ಆರೋಪಿ. ಈತನಿಂದ 27 ಕೆ.ಜಿ ಕಾಡು ಹಂದಿಯ ಮಾಂಸ ಹಾಗೂ ಕೃತ್ಯಕ್ಕೆ ಬಳಸಿದ್ದ ಕತ್ತಿ, ಮಚ್ಚು ಮತ್ತು ತಕ್ಕಡಿಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

Ambligola-Range-Forest-arrest-hunter-for-hunting-wild-bore.

ಶಿಕಾರಿಪುರ ಉಪವಿಭಾಗದ ಅಂಬ್ಲಿಗೊಳ ವಲಯ ಅರಣ್ಯಾಧಿಕಾರಿ (RFO) ಶಾಂತಪ್ಪ ಪೂಜಾರ್ ನೇತೃತ್ವದಲ್ಲಿ, ಉಪ ವಲಯ ಅರಣ್ಯಾಧಿಕಾರಿಗಳಾದ (DRFO) ಅಬ್ದುಲ್ ಕರೀಮ್, ಅಮಿತ್ ಹಾಗೂ ಗಸ್ತು ಅರಣ್ಯ ಪಾಲಕರಾದ ಕೃಷ್ಣಮೂರ್ತಿ, ಸುರೇಶ್ ಮತ್ತು ಚಂದ್ರಪ್ಪ ಲಮಾಣಿ ಅವರನ್ನೊಳಗೊಂಡ ತಂಡ ದಾಳಿ ನಡೆಸಿದೆ. ಈ ಸಂಬಂಧ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.