ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 20 DECEMBER 2024
ಶಿಕಾರಿಪುರ : ತಾಲೂಕು ಗ್ಯಾರಂಟಿ (Guarantee) ಅನುಷ್ಠಾನ ಸಮಿತಿ ಕಾರ್ಯಾಲಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು. ನಂತರ ತಾಲೂಕು ಪಂಚಾಯಿತಿ ಕಚೇರಿ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜನರ ನೆಮ್ಮದಿಯ ಬದುಕಿಗೆ ಪಂಚ ಗ್ಯಾರಂಟಿ ಯೋಜನೆಗಳು ಸಂಜೀವಿನಿಯಾಗಿವೆ. ಈ ಯೋಜನೆಗಳು ಮಧ್ಯವರ್ತಿಗಳಿಲ್ಲದೆ ಫಲಾನುಭವಿಗಳನ್ನು ನೇರವಾಗಿ ತಲುಪುತ್ತಿವೆ. ಪ್ರತಿ ಪಂಚಾಯಿತಿಗೆ ವಾರ್ಷಿಕವಾಗಿ ಸುಮಾರು 9 ಕೋಟಿ ರೂ.ನಷ್ಟು ಮೊತ್ತ ನೇರವಾಗಿ ತಲುಪುತ್ತಿವೆ. ಅರ್ಹರೆಲ್ಲರು ಈ ಯೋಜನೆ ವ್ಯಾಪ್ತಿಗೆ ಬರುವಂತೆ ಗಮನವಹಿಸಬೇಕು. ರಾಜ್ಯ ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಅದರ ಭಾಗವಾಗಿ ಶಿಕಾರಿಪುರ ತಾಲೂಕಿನ ಈಸೂರು, ಹೊಸೂರು, ಬಗಣಕಟ್ಟೆ ಗ್ರಾಮದ ಸರ್ಕಾರಿ ಶಾಲೆಗಳನ್ನು ಕೆ.ಪಿ.ಎಸ್ ಶಾಲೆಗಳನ್ನಾಗಿ ಪರಿವರ್ತಿಸಿ ಅಗತ್ಯ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಶಿರಾಳಕೊಪ್ಪದ ಒಂದು, ಶಿಕಾರಿಪುರದ ನಗರದ ಹೃದಯ ಭಾಗದ ಒಂದು ಮತ್ತು ಹೆಚ್ಚಿನ ವಿದ್ಯಾರ್ಥಿಗಳಿರುವ 2 ಶಾಲೆಗಳಿಗೆ ಅಗತ್ಯ ಸೌಲಭ್ಯ ಒದಗಿಸಿ ಕೆಪಿಎಸ್ ಶಾಲೆಗಳನ್ನಾಗಿ ಪರಿವರ್ತಿಸಲಾಗುವುದು.ಮಿನಿಸ್ಟರ್ ಹೇಳಿದ 2 ಪ್ರಮುಖಾಂಶ
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್, ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್, ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ನಾಗರಾಜ ಗೌಡ, ಪಾರಿವಾಳದ ಭಂಡಾರಿ, ಮಾಲತೇಶ್, ನಗರದ ಮಹದೇವಪ್ಪ, ಪಾಲಾಕ್ಷಪ್ಪ ಗೌಡ, ತಹಶೀಲ್ದಾರ್ ಮಲ್ಲೇಶಪ್ಪ ಪೂಜಾರ್ ಸೇರಿದಂತೆ ಅನೇಕ ಮುಖಂಡರು ಸಾರ್ವಜನಿಕರು ಉಪಸ್ಥಿತರಿದ್ದರು.
ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್ ಸುದ್ದಿ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422