ಹಬ್ಬದ ವೇಳೆ ಕೆರೆಗೆ ಹಾರಿ ‘ಮುಗಳಿಕೊಪ್ಪದ ಮುತ್ತು’ ಸಾವು

ಶಿಕಾರಿಪುರ: ಹೋರಿ ಬೆದರಿಸುವ ಹಬ್ಬದ ವೇಳೆ ಹೋರಿಯೊಂದು ಓಡುವ ಭರದಲ್ಲಿ ಕೆರೆಗೆ ಹಾರಿ ಮೃತಪಟ್ಟಿದೆ. ಶಿಕಾರಿಪುರ ತಾಲೂಕು ಹುಲಗಿನಕೊಪ್ಪ ಗ್ರಾಮದಲ್ಲಿ ಶುಕ್ರವಾರ ಆಯೋಜಿಸಿದ್ದ ಹಬ್ಬದಲ್ಲಿ ಘಟನೆ ಸಂಭವಿಸಿದೆ.➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಹುಲಗಿನಕೊಪ್ಪದಲ್ಲಿ ಶುಕ್ರವಾರ ಆಯೋಜಿಸಿದ್ದ ಹೋರಿ ಹಬ್ಬದಲ್ಲಿ ಬೇರೆ ಬೇರೆ ಜಿಲ್ಲೆಗಳಿಂದ ಅನೇಕ ಹೋರಿಗಳು ಪಾಲ್ಗೊಂಡಿದ್ದವು. ಹೋರಿಗಳಿಗೆ ಕೊಬ್ಬರಿ ಹಾಗೂ ಬಲೂನ್‌ಗಳನ್ನು ಕಟ್ಟಿ ಅಖಾಡಕ್ಕೆ ಬಿಡಲಾಗುತ್ತಿತ್ತು. ಈ ವೇಳೆ ನಾಗರಾಜ್‌ ಜಂಬೂರು ಎಂಬುವರ ಮುಗಳಿಕೊಪ್ಪದ ಮುತ್ತು ಎಂಬ ಹೆಸರಿನ ಹೋರಿ ಹುಲಗಿನಕಟ್ಟೆ ಕೆರೆಗೆ ಹಾರಿದೆ. ಕೂಡಲೆ ಕೆರೆಗೆ ಇಳಿದು ಹೋರಿಯನ್ನು ದಡಕ್ಕೆ ಎಳೆದು ತರಲಾಯಿತು.

ದಡಕ್ಕೆ ತರುವಷ್ಟರಲ್ಲಿ ಹೋರಿ ಕೊನೆಯುಸಿರೆಳೆದಿತ್ತು. ಹೋರಿ ಮಾಲೀಕರು, ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿತ್ತು. ಹಬ್ಬದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಆಯೋಜಕರು ಬೇಲಿ ಹಾಕಿ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದರೂ ಹೋರಿ ಸಾವಿನ ಘಟನೆಯು ಸ್ಥಳೀಯರಲ್ಲಿ ಬೇಸರ ಮೂಡಿಸಿದೆ.

ಮುಗಳಿಕೊಪ್ಪದ ಮುತ್ತು

ಇದನ್ನೂ ಓದಿ » ಟ್ಯಾಂಕರ್‌ ಡಿಕ್ಕಿ, ಅರಣ್ಯ ಕಾವಲುಗಾರ ಸಾವು, ಎಲ್ಲಿ? ಹೇಗಾಯ್ತು ಘಟನೆ?

Leave a Comment